ಗೋವಿಂದ ದಾಸ ಕಾಲೇಜಿನಲ್ಲಿ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮ

Upayuktha
0


ಸುರತ್ಕಲ್: ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯುಕ್ತ ಆಶ್ರಯದಲ್ಲಿ ನಡೆಯುವ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮದಲ್ಲಿ ತೃತೀಯ ಬಿ.ಎ ವಿದ್ಯಾರ್ಥಿ ಸಚಿನ್ ರವರು ಥಾಮಸ್ ಮ್ಯಾಥ್ಯೂ ರವರು ಬರೆದ “Ratan Tata – A life" ಎಂಬ ಪುಸ್ತಕವನ್ನು ಪರಿಚಯಿಸಿದರು. ಭಾರತದ ಅತ್ಯಂತ ಪ್ರಭಾವಶಾಲಿ ಉದ್ಯಮಿಗಳಲ್ಲಿ ಒಬ್ಬರಾದ ರತನ್ ಟಾಟಾ ಅವರ ಬಾಲ್ಯ, ವ್ಯಕ್ತಿತ್ವ, ನಾಯಕತ್ವ, ವೃತ್ತಿ ಜೀವನ, ಟಾಟಾ ಸಮೂಹವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ರೀತಿ, ಪ್ರಾಮಾಣಿಕತೆ, ಸರಳತೆ ಮತ್ತು ಅವರ ಸಾಮಾಜಿಕ ಕಳಕಳಿಯ ಕುರಿತ ಸಮಗ್ರ ಜೀವನ ಚಿತ್ರಣವನ್ನು ತೆರೆದಿಟ್ಟರು.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ್ ಆಚಾರ್ಯ, ಗ್ರಂಥಪಾಲಕರಾದ ಡಾ. ಸುಜಾತಾ. ಬಿ ಹಾಗೂ ಉಪನ್ಯಾಸಕ ವರ್ಗದವರು, ಶ್ರೀಮತಿ ವೆನಿಲಾ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಥಮ ಬಿ.ಎ ವಿದ್ಯಾರ್ಥಿನಿ ತೇಜಸ್ವಿನಿ ಕರ್ಕೇರ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ ಆಚಾರ್ಯ ಪಿ, ಇವರು ಸಚಿನ್ ರವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top