ದ.ಕ. ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಪುನರಾಯ್ಕೆ

Upayuktha
0


ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ೨೦೨೬-೨೯ನೇ ಸಾಲಿನ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ವೈಸ್ ಚೇರ್ಮನ್ ಆಗಿ ಡಾ. ಬಿ.ಸಚ್ಚಿದಾನಂದ ರೈ, ಖಜಾಂಜಿಯಾಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದಾರೆ.


ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್. ಎಚ್.ವಿ. ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು.


ನೂತನವಾಗಿ ಚುನಾಯಿತರಾದ ಸಿಎ ಶಾಂತಾರಾಮ ಶೆಟ್ಟಿ, ಡಾ. ಬಿ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ.ಸತೀಶ್ ರಾವ್, ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್, ಡಾ.ಸುಮನ.ಬಿ., ಪಿ.ಬಿ.ಹರೀಶ್ ರೈ ,ಸಚೇತ್ ಸುವರ್ಣ ಮತ್ತು ರಾಘವೇಂದ್ರ ರಾವ್  ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಚೇರ್ಮನ್ ಹಾಗೂ ವಿವಿಧ ಉಪ ಸಮಿತಿಗಳಿಗೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು.


ಸಿಎ ಶಾಂತಾರಾಮ ಶೆಟ್ಟಿ ಅವರು ಸತತ 4ನೇ ಅವಧಿಗೆ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಆಗಿ ಆಯ್ಕೆಯಾಗಿದ್ದು, ಪ್ರಸ್ತುತ ಅವರು ನವ  ದೆಹಲಿಯ ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ನಿರ್ವಹಣಾ ಮಂಡಳಿ ಸದಸ್ಯರಾಗಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top