ಪುತ್ತೂರು: ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಿ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ನಿರ್ಮಿಸಲಾದ ಸಿ.ಬಿ.ಜಿ (Compressed Bio Gas) ಘಟಕದ ಲೋಕಾರ್ಪಣೆ ಸಮಾರಂಭ ಮಾರ್ಚ್ 15, 2026 ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಪುತ್ತೂರು ನಗರಸಭೆಯ ಸ್ವಚ್ಛ–ಬಿನ್ನೂರು ಡಂಪಿಂಗ್ ಯಾರ್ಡ್‌ನಲ್ಲಿ ನಡೆಯಲಿದೆ.
ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್.ಎಲ್.ಪಿ, ರೋಟರಿ ಕ್ಲಬ್ ಪುತ್ತೂರು ಈಸ್ಟ್, ಸ್ವಚ್ಛ ಭಾರತ್ ಚಾರಿಟೇಬಲ್ ಟ್ರಸ್ಟ್ ಮತ್ತು ರಿಟ್ಯಾಪ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಇವರ ಸಾರಥ್ಯದಲ್ಲಿ, ಪುತ್ತೂರು ನಗರಸಭೆಯ ಸಹಯೋಗದೊಂದಿಗೆ ಈ ಯೋಜನೆ ಅನುಷ್ಠಾನಗೊಂಡಿದೆ.
ಸಮಾರಂಭವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪಪ್ರಜ್ವಲನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್.ಎಲ್.ಪಿ. ವ್ಯವಸ್ಥಾಪಕ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಕಾಡಿ, ಪುತ್ತೂರು ಎ.ಸಿ.ಪಿ ಸ್ಟೆಲ್ಲಾ ವರ್ಗೀಸ್, ಪುತ್ತೂರು ನಗರಸಭೆಯ ಪೌರಾಯುಕ್ತೆ ವಿದ್ಯಾ ಕಾಳೆ ಹಾಗೂ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ.
ಗೌರವ ಉಪಸ್ಥಿತಿಯಾಗಿ ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್, ರೋಟರಿ ಮಾಜಿ ಜಿಲ್ಲಾ ಗವರ್ನರ್ (ಡಿಸ್ಟ್ರಿಕ್ಟ್ 3181) ಎಚ್.ಆರ್. ಕೇಶವ, ರಿಟ್ಯಾಪ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕಿ ಡಾ. ದಿವ್ಯ ಪ್ರಶಾಂತ್, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ರೊ. ಶಶಿಧರ್ ಕಿನ್ನಿಮಜಲು ಉಪಸ್ಥಿತರಿರುವರು.
ನಗರದಲ್ಲಿ ಸಂಗ್ರಹವಾಗುವ ಸಾವಯವ ತ್ಯಾಜ್ಯವನ್ನು ಈ ಸಿ.ಬಿ.ಜಿ ಘಟಕದ ಮೂಲಕ ಸಂಸ್ಕರಿಸಿ ಬಯೋ ಗ್ಯಾಸನ್ನು ಉತ್ಪಾದಿಸಲಾಗುತ್ತದೆ. ಇದರಿಂದ ತ್ಯಾಜ್ಯ ನಿರ್ವಹಣೆ ಸುಧಾರಣೆ, ಪರಿಸರ ಮಾಲಿನ್ಯ ಕಡಿತ, ಕಾರ್ಬನ್ ಡೈಆಕ್ಸೈಡ್ ವಿಸರ್ಜನೆಯ ತಗ್ಗುವಿಕೆ ಸೇರಿದಂತೆ ಹಲವಾರು ಪ್ರಯೋಜನಗಳು ಲಭ್ಯವಾಗಲಿವೆ. ಅಲ್ಲದೆ ಉತ್ಪಾದನೆಯಾಗುವ ಗ್ಯಾಸನ್ನು ವಾಹನಗಳಿಗೆ ಇಂಧನವಾಗಿ ಬಳಸುವ ಸಾಧ್ಯತೆ ಕೂಡ ಇದೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಆಯೋಜಕರು ಕೋರಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


