ಸಿ ವಿ ರಾಮನ್ ಕೊಡುಗೆ ಯುವ ಜನತೆಗೆ ಸ್ಪೂರ್ತಿಯಾಗಬೇಕು: ಪ್ರೊ. ಎ.ಪಿ ರಾಧಾಕೃಷ್ಣ

Upayuktha
0


ಪುತ್ತೂರು: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನವು ಅತ್ಯಂತ ಮಹತ್ವದ ದಿನವಾಗಬೇಕು. ವಿಜ್ಞಾನ ಕ್ಷೇತ್ರಕ್ಕೆ ಹಲವಾರು ವಿಜ್ಞಾನಿಗಳು ಕೊಡುಗೆ ನೀಡಿದ್ದಾರೆ. ಅದರಲ್ಲೂ ಶ್ರೇಷ್ಠ ವಿಜ್ಞಾನಿ ಸಿ.ವಿ ರಾಮನ್  ಅವರ ಕೊಡುಗೆ ಅಪಾರವಾದುದು. ವಿದ್ಯಾರ್ಥಿಗಳು  ಕೇವಲ ಪಠ್ಯಪುಸ್ತಕದಿಂದ ಜ್ಞಾನ ಪಡೆಯಲು ಸಾಧ್ಯವಾಗುವುದಿಲ್ಲ, ಅದರೊಂದಿಗೆ ಪ್ರಾಯೋಗಿಕ ಚಟುವಟಿಕೆಗಳಲ್ಲೂ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯು ಕೃತಕ ಬುದ್ದಿಮತ್ತೆ, ಚಾಟ್ ಜಿಪಿಟಿ ಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಯುವ ಮನಸ್ಸುಗಳಿಗೆ ವಿಜ್ಞಾನ ಕ್ಷೇತ್ರದಲ್ಲಿ ಭರಪೂರ ಅವಕಾಶಗಳಿವೆ ಅದನ್ನು ಸದುಪಯೋಗಪಡಿಸಿಕೊಂಡರೆ ಉತ್ತಮ ಎಂದು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ನಿವೃತ್ತ ಭೌತಶಾಸ್ತ್ರ ಉಪನ್ಯಾಸಕ ಪ್ರೊ.ಎ.ಪಿ.ರಾಧಾಕೃಷ್ಣ ಹೇಳಿದರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಪುತ್ತೂರು ಇದರ ವಿಜ್ಞಾನ ಸಂಘ, ಭೌತಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ವಿಜ್ಞಾನ ಕ್ಷೇತ್ರಕ್ಕೆ ಸಿವಿ ರಾಮನ್ ನೀಡಿರುವ ಕೊಡುಗೆಯನ್ನು ಇಂದಿನ ವಿದ್ಯಾರ್ಥಿಗಳು ಮರೆಯಬಾರದು. ಅವರ ಸಾಧನೆ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಬೇಕು ಎಂದು ಕಾಲೇಜು ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಹೇಳಿದರು.


ವೇದಿಕೆಯಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಶಿವಪ್ರಸಾದ್ ಕೆ.ಎಸ್ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಸೌಮ್ಯ ಬಿ. ಐಕ್ಯೂಎಸಿ ಘಟಕದ ಸಂಯೋಜಕಿ ಡಾ.ರವಿಕಲಾ, ವಿಜ್ಞಾನ ಸಂಘದ ಅಧ್ಯಕ್ಷ ಗಗನ ಜೆ ರೈ, ಕಾರ್ಯದರ್ಶಿ ಜಯದೇವ, ಜೊತೆ ಕಾರ್ಯದರ್ಶಿ ದೇವಿಕಾ ಶಿವಾನಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅನ್ವಿತಾ ಯು ಸ್ವಾಗತಿಸಿ, ಅನುಶ್ರೀ ಜಿ ಪ್ರಭು ವಂದಿಸಿ, ಮನಸ್ವಿನಿ ಎಚ್ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top