ಉಪ್ಪಿನಂಗಡಿ: ಹಾಸನದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಮತ್ತು ಧರ್ಮಸ್ಥಳದಿಂದ ತಿರುಪತಿಗೆ ತೆರಳುತ್ತಿದ್ದ ರಾಜಹಂಸ ಕೆಎಸ್‌ಆರ್‌ಟಿಸಿ ಬಸ್ ನಡುವೆ ಶಿರಾಡಿ ಘಾಟ್ ಸಮೀಪ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ (ಮಾರ್ಚ್ 13) ಮಧ್ಯಾಹ್ನ ನಡೆದಿದೆ.
ಹಾಸನದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು (KA-21-N-5873) ಹಾಗೂ ಧರ್ಮಸ್ಥಳದಿಂದ ತಿರುಪತಿಗೆ ತೆರಳುತ್ತಿದ್ದ ರಾಜಹಂಸ ಕೆಎಸ್‌ಆರ್‌ಟಿಸಿ ಬಸ್ (KA-21-F-0239) ನಡುವೆ ಮಧ್ಯಾಹ್ನ ಸುಮಾರು 3.30 ಗಂಟೆ ವೇಳೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ಬಳಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಂದ್ರಶೇಖರ ಶಿಶಿಲ (57), ಜನಾರ್ದನ ಗೌಡ ಉಜಿರೆ (58), ಶ್ರೀಧರ ಗೌಡ (61) ಮರಕಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿ ಇದ್ದ ಇನ್ನೊಬ್ಬರಾದ ಸುರೇಶ್ (58) ಉಜಿರೆ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


