ಉಡುಪಿ: ಮನುಷ್ಯನ ನಿತ್ಯ ಜೀವನದಲ್ಲಿ ಗಾಳಿ ಎಷ್ಟು ಮುಖ್ಯವೋ ನೀರೂ ಅಷ್ಟೇ ಮುಖ್ಯವಾಗಿದೆ. ಆದರೆ ಅಜ್ಞಾನ ಮತ್ತು ನಿರ್ಲಕ್ಷ್ಯದಿಂದ ಪರಿಸರ ಹಾನಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.
ಅವೈಜ್ಞಾನಿಕ ನಗರೀಕರಣ ಮತ್ತು ಅವ್ಯವಸ್ಥಿತ ಭೂಗತ ಚರಂಡಿ ವ್ಯವಸ್ಥೆಯ ಪರಿಣಾಮವಾಗಿ ಉಡುಪಿ ನಗರಸಭಾ ವ್ಯಾಪ್ತಿಯ ಅನೇಕ ಜಲಮೂಲಗಳು ನಾಶದ ಅಂಚಿನಲ್ಲಿದ್ದು, ಹಲವೆಡೆ ಬಾವಿಗಳ ನೀರು ಕಲುಷಿತಗೊಂಡು ಕುಡಿಯಲು ಯೋಗ್ಯವಾಗಿಲ್ಲ ಎಂಬ ಸಮಸ್ಯೆ ಎದುರಾಗುತ್ತಿದೆ. ಪಕ್ಕದ ಮನೆಯ ಸಮಸ್ಯೆ ನನ್ನ ಸಮಸ್ಯೆಯಲ್ಲ ಎನ್ನುವ ಉದಾಸೀನ ಮನೋಭಾವವೂ ಸಮಸ್ಯೆ ಮತ್ತಷ್ಟು ಗಂಭೀರವಾಗಲು ಕಾರಣವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಸಮಸ್ಯೆಯ ಮೂಲ ಮತ್ತು ಪರಿಹಾರಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನೀರಿನ ಗುಣಮಟ್ಟ ಪರೀಕ್ಷೆ ಮಾಡುವ ವಿಧಾನ, ಪರೀಕ್ಷೆ ನಡೆಸುವ ಸ್ಥಳಗಳು ಹಾಗೂ ಅದರ ವೆಚ್ಚ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಕಾರ್ಯಕ್ರಮದಲ್ಲಿ ವಿವರವಾಗಿ ತಿಳಿಸಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಡಾ. ರವೀಂದ್ರನಾಥ ಶಾನುಭಾಗ ಅವರು ಮುಖ್ಯ ಭಾಷಣ ಮಾಡಲಿದ್ದು, ನಾಗರಿಕರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಕಾರ್ಯಕ್ರಮವು ಇಂದು (ಮಾ.14) ಉಡುಪಿಯ ಶಾರದಾ ಮಂಟಪ ರಸ್ತೆಯಲ್ಲಿರುವ IYC ಯಕ್ಷಗಾನ ಕಲಾರಂಗದ ಸಭಾಭವನದಲ್ಲಿ ನಡೆಯಲಿದೆ.
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಡ್ರೈನೇಜ್ ಸಮಸ್ಯೆಯಿಂದ ಬಾಧಿತರಾಗಿರುವ ನಾಗರಿಕರು ತಮ್ಮ ಸಮಸ್ಯೆಗಳ ವಿವರಗಳನ್ನು ವಾಟ್ಸಾಪ್ ಮೂಲಕ ಹಂಚಿಕೊಳ್ಳುವಂತೆ ಮಾನವ ಹಕ್ಕು ರಕ್ಷಣಾ ಪ್ರತಿಷ್ಠಾನ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ 6362835435 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


