ಶಿವಮೊಗ್ಗ: ಪ್ರತಿಷ್ಠಿತ ಮಾನಸ ಟ್ರಸ್ಟ್ (ರಿ.) ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟದ ಸಂಸ್ಥೆಗಳನ್ನು ಸ್ಥಾಪಿಸಿ, ಇಂದಿನ ಅವಶ್ಯಕತೆಗಳಿಗೆ ಅನುಗುಣವಾದ ವಿವಿಧ ಕೋರ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಾ ಬರುತ್ತಿದೆ. ಈ ಸಂಸ್ಥೆಗಳ ಪೈಕಿ Kateel Ashok Pai Memorial Institute of Allied Health Sciences (KAPMIAHS) ವಿಶೇಷವಾಗಿ ಕ್ಲಿನಿಕಲ್ ಸೈಕಾಲಜಿ ಕ್ಷೇತ್ರದಲ್ಲಿ ಎಂಎಸ್‌ಸಿ ಮತ್ತು ಎಂ.ಫಿಲ್ ಕೋರ್ಸ್‌ಗಳನ್ನು ಯಶಸ್ವಿಯಾಗಿ ನಡೆಸುತ್ತಿರುವ ಪ್ರಮುಖ ಶಿಕ್ಷಣ ಸಂಸ್ಥೆಯಾಗಿದೆ.
2023–25ನೇ ಸಾಲಿನ ಎಂಎಸ್‌ಸಿ ಕ್ಲಿನಿಕಲ್ ಸೈಕಾಲಜಿ ಕೋರ್ಸ್‌ನ ಫಲಿತಾಂಶಗಳನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ KAPMIAHS ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಒಟ್ಟು 10 ರ‍್ಯಾಂಕ್‌ಗಳಲ್ಲಿ 7 ರ‍್ಯಾಂಕ್‌ಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಉನ್ನತ ಶ್ರೇಣಿಯಲ್ಲಿ ಯಶಸ್ವಿಯಾಗಿ ರ‍್ಯಾಂಕ್‌ಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಅವರಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರಿಗೆ ಮಾನಸ ಟ್ರಸ್ಟ್ ವತಿಯಿಂದ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

