ಮಂಗಳೂರು: ನಿಟ್ಟೆ ಪರಿಗಣಿತ ವಿ.ವಿ ದೇರಳಕಟ್ಟೆ ಇದರ ಅಂಗ ಸಂಸ್ಥೆಯಾದ ನಿಟ್ಟೆ ಉಷಾ ಇನ್ಸ್‌ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗದ ವತಿಯಿಂದ ಸಮುದಾಯ ಆಧಾರಿತ ವಿಪತ್ತು ನಿರ್ವಹಣೆ ಕುರಿತು ಕಾರ್ಯಾಗಾರ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಾಗಾರ ಉದ್ಘಾಟಿಸಿದ ನಿಟ್ಟೆ ಪರಿಗಣಿತ ವಿ.ವಿ.ಯ ಎನ್‌ಎಸ್‌ಎಸ್ ಸಂಯೋಜಕ ಶಶಿಕುಮಾರ್ ಶೆಟ್ಟಿ ಮಾತನಾಡಿ ‘ಯುವ ಜನರು ಮತ್ತು ಎನ್‌ಎಸ್‌ಎಸ್ ಸ್ವಯಂಸೇವಕರು ಸಮುದಾಯ ಸೇವೆ ಹಾಗೂ ವಿಪತ್ತು ನಿರ್ವಹಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಪರಿಣಾಮಕಾರಿ ವಿಪತ್ತು ನಿರ್ವಹಣೆ ಗ್ರಾಮೀಣ ಮಟ್ಟದಿಂದಲೇ ಆರಂಭವಾಗಬೇಕು. ವಿವಿಧ ವಿಭಾಗಗಳ ಸಮನ್ವಯ ಅಗತ್ಯವಿದೆ ಎಂದರು.
ಕಾರ್ಯಕ್ರಮದ ಸಂಘಟನಾ ಅಧ್ಯಕ್ಷೆ ಡಾ. ನೀತಾ ಕಾಮತ್ ಅವರು ಕಾರ್ಯಾಗಾರದ ಉದ್ದೇಶ ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ. ಸರಿತಾ ಟೆಲ್ಮಾ ಫರ್ನಾಂಡಿಸ್, ಡಾ. ವರ್ಷಾ ಶೆಟ್ಟಿ, ಡಾ. ದಶರಥ ಅಂಗಡಿ ಮತ್ತು ಡಾ. ಶ್ರುತಿ ಅವರು ಸಮುದಾಯ ಆಧಾರಿತ ವಿಪತ್ತು ನಿರ್ವಹಣೆಯ ಸಿದ್ಧತೆ, ಪ್ರತಿಕ್ರಿಯೆ ಹಾಗೂ ಪುನರ್ವಸತಿ ಕುರಿತು ಉಪನ್ಯಾಸ ನೀಡಿದರು. ಡಾ. ಸುಚಿತ್ರಾ ಬಿ.ಎಸ್. ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


