ಮಂಗಳೂರು: ಕ್ರಿಕೆಟ್ ಆಟದ ಮೂಲಕ ಶಿಸ್ತು ಕಲಿಯಲು ಸಾಧ್ಯ, ನಾಯಕತ್ವ ಗುಣವನ್ನು ಕೂಡಾ ರೂಪಿಸಲು ಸಾಧ್ಯವಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಅಭಿಪ್ರಾಯ ಪಟ್ಟರು.
ಮಂಗಳ ಕಾಲೇಜು ಆಫ್ ಫಿಸಿಯೋಥೆರಫಿ ವತಿಯಿಂದ ನೀರುಮಾರ್ಗದಲ್ಲಿ ಆಯೋಜಿಸಲಾದ ಅಂತರ್ ಕಾಲೇಜು ಫಿಸಿಯೋ ಕ್ರಿಕೆಟ್ ಪಂದ್ಯಾವಳಿ ಮಂಗಳಾ ಮ್ಯಾಗ್ನಸ್ ಕಪ್ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತಮ್ಮನ್ನು ತೊದಗಿಸಿಕೊಳ್ಳುವಂತೆ ಕರೆ ನೀಡಿದರು.
ಮಂಗಳಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಗಣಪತಿ ಮಾತನಾಡಿ, ಕ್ರಿಕೆಟ್ ಎಂಬುದು ಜಾತಿ, ಮತ, ಧರ್ಮವನ್ನು ಮೀರಿದ ಆಟವಾಗಿದೆ. ಇದರಲ್ಲಿ ವೈವಿಧ್ಯ ಹಾಗೂ ಏಕತೆಯನ್ನು ಕಾಣಬಹುದಾಗಿದೆ. ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಇದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಸಂಯೋಜಕರಾದ ಡಾ. ಭರತ್ ಕೆ ಎಚ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ವಿವಿಧ ಕಾಲೇಜುಗಳ ಪುರುಷರು ಹಾಗೂ ಮಹಿಳೆಯರ 30 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿವೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

