ಗೋವಿಂದ ಭಟ್ಟರ ನಿಧನ; ದ.ಕ ಜಿಲ್ಲಾ ಸಾಹಿತ್ಯ ಪರಿಷತ್ತು ಸಂತಾಪ

Upayuktha
0


ಮಂಗಳೂರು: ಯಕ್ಷಗಾನದ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ಟರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂತಾಪ ಸೂಚಿಸಿದೆ.

ದಶಾವತಾರಿ ಹಾಗೂ ವಿವಿಧ ಪಾತ್ರಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಗೋವಿಂದ ಭಟ್ಟರು ಯಕ್ಷಗಾನ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದರು. ಅವರ ಅಭಿನಯ, ವಾಚಿಕೆ ಮತ್ತು ಪಾತ್ರ ವೈಶಿಷ್ಟ್ಯವು ದೀರ್ಘಕಾಲ ಪ್ರೇಕ್ಷಕರ ಮನಸ್ಸನ್ನು ಸೆಳೆದಿದ್ದು, ಅವರ ಕಲಾಸೇವೆ ಯಕ್ಷಗಾನ ಲೋಕದಲ್ಲಿ ಅಚ್ಚಳಿಯದ ಗುರುತು ಮೂಡಿಸಿದೆ ಎಂದು ಪರಿಷತ್ ಅಭಿಪ್ರಾಯಪಟ್ಟಿದೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top