ಬೆಂಗಳೂರು: ಬೆಂಗಳೂರು ನಗರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿವಿಧ ದೇವಾಲಯಗಳಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರ ಮನಸೆಳೆದವು. ಈ ಸಂದರ್ಭದಲ್ಲಿ ದ್ವಾದಶ ಜ್ಯೋತಿರ್ಲಿಂಗ ಶ್ರೀ ಓಂಕಾರೇಶ್ವರ ದೇವಸ್ಥಾನ, ಬಯಲು ಬಸವೇಶ್ವರ ಸ್ವಾಮಿ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಹಾಗೂ ಬಾಲ ಕೃಷ್ಣ ಬಯಲು ರಂಗ ಮಂದಿರ ನಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ನೃತ್ಯಗುರು ವಿದುಷಿ ರೂಪಶ್ರೀ ಕೆ.ಎಸ್. ಅವರ ನಿರ್ದೇಶನದಲ್ಲಿ ಶ್ರೀ ಹೃದ್ಯಾ ಅಕಾಡೆಮಿ ತಂಡದ ವಿದ್ಯಾರ್ಥಿಗಳು ಭಕ್ತಿಭಾವಪೂರ್ಣ ನೃತ್ಯ ಪ್ರದರ್ಶನ ನೀಡಿ ಪ್ರೇಕ್ಷಕರ ಮನಸೆಳೆದರು. ಶಿವತತ್ವವನ್ನು ಪ್ರತಿಬಿಂಬಿಸುವ ವಿವಿಧ ನೃತ್ಯ ರೂಪಗಳು ಮತ್ತು ಸಂಯೋಜಿತ ಹೆಜ್ಜೆಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು.
ಮಹಾಶಿವರಾತ್ರಿಯ ಪವಿತ್ರ ಸಂದರ್ಭದಲ್ಲಿ ನಡೆದ ಈ ನೃತ್ಯ ಕಾರ್ಯಕ್ರಮ ಭಕ್ತರಿಗೆ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ರಸದೌತಣ ನೀಡಿತು. ಪ್ರೇಕ್ಷಕರು ವಿದ್ಯಾರ್ಥಿಗಳ ನೃತ್ಯ ಪ್ರದರ್ಶನವನ್ನು ಕೊಂಡಾಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

