ದೀಕ್ಷಾನ್ವಯ: ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Upayuktha
0


ಉಜಿರೆ: ಶ್ರೀ ಧರ್ಮಸ್ಠಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್.) ದಲ್ಲಿ ಮಾರ್ಚ್ 02 ರಂದು 2025-26 ನೇ ಸಾಲಿನ ಬಿ.ಎಡ್. ತರಗತಿಯ ಪ್ರಾರಂಭೋತ್ಸವ “ದೀಕ್ಷಾನ್ವಯ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಈ ಕಾರ್ಯಕ್ರಮದಲ್ಲಿ ಶ್ರೀ ರಾಜೇಶ್ ಕಕ್ರನ್ನಾಯ ಎ, ವಿಜ್ಞಾನ ವಿಭಾಗ ಮುಖ್ಯಸ್ಥರು, ಎಸ್.ಡಿ.ಎಂ. ಪಾಲಿಟೆಕ್ನಿಕ್ ಉಜಿರೆ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಿಕ್ಷಕ ಬೋಧನೆ ಉತ್ತಮವಾಗಿರಬೇಕಾದರೆ ತರಬೇತಿ ಮುಖ್ಯವಾಗಿರುತ್ತದೆ. ಪ್ರತಿಯೊಬ್ಬ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿ ಶಿಕ್ಷಕರಾಗಬೇಕಾದರೆ ಶಿಸ್ತು, ತಾಳ್ಮೆ, ಕ್ರಿಯಾಶೀಲತೆ, ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆ ಹಾಗೂ ಕುಶಲತೆ ಹೊಂದಿರಬೇಕು ಎಂದು ಹೇಳುತ್ತಾ ತಮ್ಮ ಬಿ.ಎಡ್. ತರಬೇತಿಯ ಅನುಭವವನ್ನು ಎಳೆ ಎಳೆಯಾಗಿ ತಿಳಿಸಿದರು. ಶಿಕ್ಷಕ ವೃತ್ತಿಯು ಉಳಿದೆಲ್ಲಾ ವೃತ್ತಿಗಳಿಗಿಂತಲೂ ಶ್ರೇಷ್ಠವಾದದ್ದು ಎಂದು ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ್ ಸಲ್ಡಾನರವರು ಮಾತನಾಡಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಸಂಸ್ಕöÈತಿ ಮತ್ತು ಶಿಕ್ಷಕ ತರಬೇತಿಯಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ. ಗುಣಮಟ್ಟದ ಶಿಕ್ಷಣ ದೊರಕುವುದಲ್ಲದೇ ಸರ್ವತೋಮುಖ ಕೌಶಲಗಳನ್ನು ಮೈಗೂಡಿಸಿಕೊಳ್ಳಲು ಶಿಕ್ಷಕ ತರಬೇತಿಯ ಅವಶ್ಯಕತೆ ಇದೆ ಎಂದರು. ವೇದಿಕೆಯಲ್ಲಿ ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ಸಂಯೋಜಕರಾದ ಶ್ರೀಮತಿ ಅನುಷಾ ಡಿ. ಜೆ. ಹಾಗೂ ವಿದ್ಯಾರ್ಥಿ ನಾಯಕಿ ಸಾಯಿದೃತಿ ಶೆಟ್ಟಿ ಉಪಸ್ಥಿತರಿದ್ದರು.


ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳನ್ನು ಭಾರತದ ನಕಾಶೆಯ ಸುತ್ತಲು ದೀಪ ಬೆಳಗಿಸುವ ಮೂಲಕ ಬರಮಾಡಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು, ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಪೋಷಕರು ಹಾಗೂ ಬಿ.ಎಡ್. ಮತ್ತು ಡಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ವರ್ಷ ಸ್ವಾಗತಿಸಿ, ಯಶಸ್ವಿನಿ ವಂದಿಸಿ, ಎ. ಎಸ್. ಪೂಜಾ ಕಾರ್ಯಕ್ರಮವನ್ನು ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top