ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Upayuktha
0

 


ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಸೋಮವಾರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿಯನ್ನು ಉದ್ಘಾಟಿಸಿದರು.

ಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸೋಮವಾರ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.


ದೇವಳ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣ ರಾವ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಸುಬ್ರಹ್ಮಣ್ಯಪ್ರಸಾದ್, ಯಶೋಧರ, ಸಂತೋಷ, ಸಂದೀಪ್ ರೈ, ಮಂಜುಳಾ ಉಪಸ್ಥಿತರಿದ್ದರು.


ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲಿಚ್ಛಿಸುವರು ಏಪ್ರಿಲ್ ೨೫ರೊಳಗೆ ಹೆಸರು ನೋಂದಾಯಿಸಲು ಕೋರಲಾಗಿದೆ.


ಹೆಚ್ಚಿನ ಮಾಹಿತಿಗೆ ಮೊಬೈಲ್: 0825626644, 9663464648, 8147263422



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top