ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಮಾರ್ಚ್ 27ರಿಂದ

Upayuktha
0

50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್



ಪುತ್ತೂರು: ನಗರದ ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್‌ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ವಾಣಿಜ್ಯ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸುತ್ತಿದೆ. ‘ವೈಡಸ್ಟ್ ರೇಂಜ್, ಎಂಡ್‌ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರದ ಆಭರಣ ಪ್ರಿಯರಿಗೆ ವಿಶಿಷ್ಟ ಅವಕಾಶ ಒದಗಿಸುತ್ತಿದೆ.


ಈ ಡೈಮಂಡ್ ಫೆಸ್ಟ್‌ನ ಅಂಗವಾಗಿ ಗ್ರಾಹಕರು ₹50,000 ಅಥವಾ ಅದಕ್ಕಿಂತ ಹೆಚ್ಚು ಮೌಲ್ಯದ ಖರೀದಿ ಮಾಡಿದಲ್ಲಿ ಖಚಿತ ಉಡುಗೊರೆಯನ್ನು ಪಡೆಯಬಹುದಾಗಿದೆ. ಜೊತೆಗೆ, ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ ಇವಿ ಸ್ಕೂಟರ್ ಗೆಲ್ಲುವ ಅವಕಾಶವೂ ಇದೆ. ಈ ಆಫರ್ ಗ್ರಾಹಕರಲ್ಲಿ ಹೆಚ್ಚುವರಿ ಆಕರ್ಷಣೆಯನ್ನುಂಟುಮಾಡುತ್ತಿದೆ.


ವಜ್ರದ ಆಭರಣಗಳ ಮೇಲೆ 95% ಎಕ್ಸ್‌ಚೇಂಜ್ ಮತ್ತು 90% ಬೈಬ್ಯಾಕ್ ಸೌಲಭ್ಯವನ್ನು ಸಂಸ್ಥೆ ನೀಡುತ್ತಿದ್ದು, ಹಳೆಯ ಆಭರಣಗಳನ್ನು ಹೊಸದಾಗಿ ಪರಿವರ್ತಿಸಿಕೊಳ್ಳಲು ಇದು ಉತ್ತಮ ಅವಕಾಶ ಎಂದು ಸಂಸ್ಥೆ ತಿಳಿಸಿದೆ. ಮದುವೆ ಹಾಗೂ ಹಬ್ಬಗಳ ಸೀಸನ್‌ಗಳನ್ನು ಗಮನದಲ್ಲಿಟ್ಟುಕೊಂಡು ವಿವಿಧ ವಿನ್ಯಾಸಗಳ ಹಾರಗಳು, ಕಿವಿಯೋಲೆಗಳು, ಉಂಗುರಗಳು ಸೇರಿದಂತೆ ಹಲವಾರು ನವೀನ ಸಂಗ್ರಹವನ್ನು ಪ್ರದರ್ಶಿಸಲಾಗಿದೆ.


ಅಮೂಲ್ಯ ಡೈಮಂಡ್ಸ್‌ ಮತ್ತು ಕಿಸ್ನ ಡೈಮಂಡ್ & ಗೋಲ್ಡ್ ಜ್ಯುವೆಲ್ಲರಿ ಬ್ರ್ಯಾಂಡ್‌ಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಈ ಉತ್ಸವವು ಗುಣಮಟ್ಟ ಮತ್ತು ವೈವಿಧ್ಯತೆಯಲ್ಲಿಯೂ ಗಮನ ಸೆಳೆಯುತ್ತಿದೆ.


ಗ್ರಾಹಕರು ತಮ್ಮ ಸಮೀಪದ ಶೋರೂಮ್‌ಗಳಿಗೆ ಭೇಟಿ ನೀಡಿ ಈ ವಿಶೇಷ ಆಫರ್‌ಗಳನ್ನು ಬಳಸಿಕೊಳ್ಳಬಹುದು. ಪುತ್ತೂರು, ಬೆಳ್ತಂಗಡಿ, ಮಡಿಕೇರಿ ಹಾಗೂ ಗೋಣಿಕೊಪ್ಪ ಸೇರಿದಂತೆ ವಿವಿಧ ಶಾಖೆಗಳಲ್ಲಿ ಈ ಡೈಮಂಡ್ ಫೆಸ್ಟ್ ನಡೆಯುತ್ತಿದೆ.


ಉತ್ಸವದ ಕುರಿತು ಪ್ರತಿಕ್ರಿಯಿಸಿದ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಮಾತನಾಡಿ, “ಗ್ರಾಹಕರಿಗೆ ಅತ್ಯುತ್ತಮ ಗುಣಮಟ್ಟದ  ಆಭರಣಗಳನ್ನು ಸ್ಪರ್ಧಾತ್ಮಕ ಬೆಲೆಯಲ್ಲೇ ಒದಗಿಸುವುದು ನಮ್ಮ ಉದ್ದೇಶ. ಈ ಡೈಮಂಡ್ ಫೆಸ್ಟ್ ಮೂಲಕ ಹೆಚ್ಚಿನ ಜನರಿಗೆ ವಿಶೇಷ ಅನುಭವ ನೀಡಲು ನಾವು ಸಜ್ಜಾಗಿದ್ದೇವೆ,” ಎಂದು ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top