ದ.ಕ ಜಿಲ್ಲೆಗೆ ನಿರಾಶಾದಾಯಕ ಬಜೆಟ್: ಶಾಸಕ ಡಾ. ಭರತ್ ಶೆಟ್ಟಿ ಟೀಕೆ

Upayuktha
0


ಸುರತ್ಕಲ್: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ದಕ್ಷಿಣ ಕನ್ನಡ ಜಿಲ್ಲೆಗೆ ನಿರಾಶಾದಾಯಕವಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಬಜೆಟ್ ರಾಜ್ಯದ ಜನತೆಗೆ ಸಾಲದ ಹೊರೆಯ ಭಾಗ್ಯ ನೀಡುವಂತಾಗಿದೆ. ಅಭಿವೃದ್ಧಿಗೆ ಅಗತ್ಯವಾದ ಸ್ಪಷ್ಟ ಚಿಂತನೆ ಇಲ್ಲದ ಬಜೆಟ್ ಇದಾಗಿದ್ದು, ರಾಜ್ಯವನ್ನು ಮತ್ತಷ್ಟು ಸಾಲದತ್ತ ತಳ್ಳುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.


ಯುವಕರ ಕೈಬಲ ಪಡಿಸುವಂತಹ ಯಾವುದೇ ಪರಿಣಾಮಕಾರಿ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿಲ್ಲ. ಮೀನುಗಾರ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರಕ್ಕೂ ಸರಕಾರ ಅಗತ್ಯ ಮಹತ್ವ ನೀಡಿಲ್ಲ ಎಂದು ಅವರು ಟೀಕಿಸಿದರು.


ಒಟ್ಟಾರೆ ರಾಜ್ಯದ ಪ್ರಗತಿಗೆ ಕೊಡುಗೆ ನೀಡದ ನೀರಸ ಬಜೆಟ್ ಇದಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top