ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ಟರ ನಿಧನಕ್ಕೆ ಡಾ. ಹೆಗ್ಗಡೆ ಸಂತಾಪ

Upayuktha
0


ಧರ್ಮಸ್ಥಳ: ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ಅವರು ನಿಧನರಾಗಿದ್ದು, ಯಕ್ಷಗಾನ ಕ್ಷೇತ್ರದಲ್ಲಿ ದುಃಖದ ನೆರಳು ಆವರಿಸಿದೆ. ಅವರ ನಿಧನದ ಸುದ್ದಿ ತಿಳಿದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ.


ಧರ್ಮಸ್ಥಳ ಮೇಳದಲ್ಲಿ ಸುಮಾರು 54 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದ ಗೋವಿಂದ ಭಟ್ ಅವರು, ಹಿರಿಯ ಕಲಾವಿದ ಕುರಿಯ ವಿಠಲಶಾಸ್ತ್ರಿಗಳಲ್ಲಿ ಯಕ್ಷಗಾನ ಮತ್ತು ನಾಟ್ಯದಲ್ಲಿ ತರಬೇತಿ ಪಡೆದು ಪ್ರಬುದ್ಧ ಕಲಾವಿದರಾಗಿ ಹೊರಹೊಮ್ಮಿದ್ದರು. ಕೌರವ, ಬಾಹುಬಲಿ, ಇಂದ್ರಜಿತು, ಕರ್ಣ, ಅರ್ಜುನ, ದೇವೇಂದ್ರ ಮೊದಲಾದ ಪ್ರಮುಖ ಪಾತ್ರಗಳ ಮೂಲಕ ಅವರು ವಿಶಿಷ್ಟ ಗುರುತಿಸಿಕೊಂಡಿದ್ದರು.


ಪುರಾಣ ಪ್ರಸಂಗಗಳು, ಯಕ್ಷಗಾನ, ಧರ್ಮ, ಕಲೆ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಆಳವಾದ ಅಧ್ಯಯನ ನಡೆಸಿದ್ದ ಅವರು ಅಪಾರ ಪಾಂಡಿತ್ಯವನ್ನು ಹೊಂದಿದ್ದರು. ಅವರ ವಾಕ್‌ಚಾತುರ್ಯ, ಪ್ರೌಢ ಅಭಿನಯ ಮತ್ತು ವಿದ್ವತ್ಪೂರ್ಣ ಮಾತುಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದವು.


ಧರ್ಮಸ್ಥಳದ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ತರಬೇತುದಾರರಾಗಿ ಹಾಗೂ ಗುರುಗಳಾಗಿ ಸೇವೆ ಸಲ್ಲಿಸಿದ್ದ ಅವರು, ಪುರಾಣ ವಾಚನ-ಪ್ರವಚನ ಮತ್ತು ಭಜನಾ ತರಬೇತಿಗಳಲ್ಲಿಯೂ ಮಾರ್ಗದರ್ಶಕರಾಗಿ ಸೇವೆ ನೀಡಿದ್ದರು.


“ಅವರ ನಿಧನವು ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಕುಟುಂಬ ವರ್ಗದವರಿಗೆ ಈ ದುಃಖವನ್ನು ಸಹಿಸುವ ಶಕ್ತಿ ದೊರೆಯಲಿ ಎಂದು ಶ್ರೀ ಮಂಜುನಾಥ ಸ್ವಾಮಿಯನ್ನು ಪ್ರಾರ್ಥಿಸುತ್ತೇನೆ,” ಎಂದು ಡಿ. ವೀರೇಂದ್ರ ಹೆಗ್ಗಡೆ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.


ಗೋವಿಂದ ಭಟ್ ಅವರ ಅಗಲಿಕೆಯಿಂದ ಯಕ್ಷಗಾನ ಲೋಕದಲ್ಲಿ ಶೂನ್ಯತೆ ಉಂಟಾಗಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top