ಮಂಗಳೂರು: ನಿಯಮಿತ ಶ್ರವಣ ತಪಾಸಣೆ, ಸುರಕ್ಷಿತ ಶ್ರವಣ ಅಭ್ಯಾಸ ಹಾಗೂ ನಿರಂತರ ಆರೋಗ್ಯ ಜಾಗೃತಿ ಮೂಲಕ ಶ್ರವಣ ದೋಷ ನಿವಾರಣೆ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜಾಗೃತರಾಗಬೇಕು ಎಂದು ಯುನಿಟಿ ಆಸ್ಪತ್ರೆಯ ಮೂಳೆ ಮತ್ತು ಕೀಲುಶಸ್ತ್ರಚಿಕಿತ್ಸಕ ಹಾಗೂ ಕೆಒಎ ಅಧ್ಯಕ್ಷ ಡಾ. ಬಿ. ಸಚ್ಚಿದಾನಂದ ರೈಹೇಳಿದರು.
ನಗರದ ಸೇಂಟ್ ಆಗ್ನೆಸ್ ಕಾಲೇಜು (ಸ್ವಾಯತ್ತ) ಇಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‍ಕ್ರಾಸ್, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ವಾಕ್‍ಮತ್ತು ಶ್ರವಣ ವಿಭಾಗ ಮತ್ತು ಕಾಲೇಜಿನ ಯುವ ರೆಡ್‍ಕ್ರಾಸ್ ಘಟಕದ ಸಹಯೋಗದಲ್ಲಿ ವಿಶ್ವ ಶ್ರವಣ ದಿನದ ಅಂಗವಾಗಿ ಕಿವಿ ತಪಾಸಣೆ ಶಿಬಿರ ಮತ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‍ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್., ಯುವಜನರಲ್ಲಿ ಕಿವಿಮತ್ತು ಶ್ರವಣ ಆರೈಕೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಶ್ರವಣ ದಿನವನ್ನು ಆಚರಿಸುವ ಮಹತ್ವದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲೆ ಡಾ. ರೂಪಾ ರೊಡ್ರಿಗಸ್ ಎ.ಸಿ. ಶ್ರವಣ ದೋಷ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯ. ಅಲ್ಲದೇ, ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿಸಂಪನ್ಮೂಲ ವ್ಯಕ್ತಿಯಾಗಿ ಶ್ರವಣಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಪ್ರಶಾಂತಿ ಪೂವಯ್ಯ, ಕಿವಿಯ ನೈರ್ಮಲ್ಯ, ಶ್ರವಣ ನಷ್ಟಕ್ಕೆ ಕಾರಣ, ತಡೆಗಟ್ಟುವ ವಿಧಾನ ಮತ್ತು ಆರಂಭಿಕ ಹಂತದಲ್ಲಿ ತೆಗೆದುಕೊಳ್ಳಬೇಕಾಗಿರುವ ಮುನ್ನೆಚ್ಚರಿಕಾ ವಿಧಾನಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ವಾಕ್ ಮತ್ತು ಶ್ರವಣ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ್ದ ಮಾದರಿ ಮತ್ತು ಪ್ರದರ್ಶನ ವಿಶೇಷ ಗಮನ ಸೆಳೆಯಿತು. ಅಲ್ಲದೇ, ಶ್ರವಣ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ವಿದ್ಯಾರ್ಥಿಗಳ ಸೃಜನಶೀಲ ಪ್ರಯತ್ನಗಳನ್ನು ಗುರುತಿಸುವ ರೀಲ್ ತಯಾರಿಕೆ ಸ್ಪರ್ಧೆಯಲ್ಲಿ ಗೋವಿಂದದಾಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನವಿದ್ಯಾರ್ಥಿಗಳು ದ್ವಿತೀಯ ಬಹುಮಾನ ಪಡೆದುಕೊಂಡರು.
ಕಿವಿ ತಪಾಸಣಾ ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ 13 ಕಾಲೇಜುಗಳ ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದರು. ಇವರಿಗೆ ವೃತ್ತಿ ಪರಶ್ರವಣ ತಪಾಸಣೆ ಮತ್ತು ಮಾರ್ಗದರ್ಶನ ನೀಡಲಾಯಿತು.
ಇದೇವೇಳೆ, ಕಾಲೇಜಿನ ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ನಿಮಿತಾ ಅವರು ಸೇರಿದಂತೆ ನಾನಾ ಕಾಲೇಜಿನ ಯುವ ರೆಡ್‍ಕ್ರಾಸ್ ಕಾರ್ಯಕ್ರಮ ಅಧಿಕಾರಿಗಳು ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


