ಶಿವಮೊಗ್ಗ: ಇಲ್ಲಿನ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಇಂದು ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಕಾರ್ಕಳ ಮೂಲದ ಲಾವಣ್ಯ (25) ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದು, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ವಾಟರ್ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಟ್ಯಾಂಕರ್ ಅಡಿಯಲ್ಲಿ ಸಿಲುಕಿದ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್ ಲಾರಿ ನೀರು ಪೂರೈಕೆ ಮಾಡುತ್ತಿತ್ತು. ಆಸ್ಪತ್ರೆ ಆವರಣದಲ್ಲಿ ವಿದ್ಯಾರ್ಥಿನಿಯರಿಬ್ಬರು ತೆರಳುತ್ತಿದ್ದ ಈ ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿನಿ ಮೇಲೆ ಟ್ಯಾಂಕರ್ ಹರಿದಿದ್ದು, ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ವಿದ್ಯಾರ್ಥಿನಿ ಓವೇರಿಯಾ ಎಂಬಾಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

