ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಉಚಿತ ಶಿಕ್ಷಣದ ವಿಶೇಷ ಅವಕಾಶವನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗಿದೆ. ಮೂಡುಬಿದಿರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ನಲ್ಲಿ ಭರತನಾಟ್ಯ ಕಲಿಕೆಯ ಉಚಿತ ಅವಕಾಶವನ್ನು ಹೊಸದಾಗಿ ಆರಂಭಿಸಲಾಗುತ್ತಿದೆ.
ಶಾಸ್ತ್ರೀಯ ನೃತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಶಾಸ್ತ್ರೀಯ ನೃತ್ಯಪ್ರಕಾರವಾದ ಭರತನಾಟ್ಯ, ಜೊತೆಗೆ ಯೋಗಾಭ್ಯಾಸ ಹಾಗೂ ಸಂಬಂಧಿತ ಕಲಾ ತರಬೇತಿಗಳನ್ನು ಪಡೆಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಇಲ್ಲಿ ವ್ಯವಸ್ಥಿತ ತರಬೇತಿ ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.
ಸಂಸ್ಥೆಯ ಪರಂಪರೆಯಂತೆ ಕಲೆ, ಸಂಸ್ಕೃತಿ ಮತ್ತು ಶಿಕ್ಷಣದ ಸಮನ್ವಯದ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಅವಕಾಶವನ್ನು ನೀಡಲಾಗಿದೆ. ಭರತನಾಟ್ಯದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಈ ಉಚಿತ ಶಿಕ್ಷಣ ಯೋಜನೆಯ ಸದುಪಯೋಗ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಈ ತರಬೇತಿಗೆ ಸೇರಲು ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಮಾಹಿತಿಗಾಗಿ 9535626046, 8971161797, 9480529236 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


