ಪುತ್ತೂರು: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ಮುಂದಿನ ಹಂತಕ್ಕೆ ತಲುಪಿಸುವ ನಿಟ್ಟಿನಲ್ಲಿ ಸಂಪ್ಯದಲ್ಲಿರುವ ಅಕ್ಷಯ ಪಿಯು ಕಾಲೇಜು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಕಾಲೇಜು ವತಿಯಿಂದ ಉಚಿತ ಕ್ರ್ಯಾಶ್ ಕೋರ್ಸ್‌ಗಳನ್ನು ಆರಂಭಿಸಲಾಗಿದ್ದು, ಇದು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಉತ್ತಮ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುವ ಈ ಸಂಸ್ಥೆ, ಸ್ಪರ್ಧಾತ್ಮಕ ಪರೀಕ್ಷೆಗಳಾದ CET, NEET ಹಾಗೂ IIT-JEEಗೆ ವಿಶೇಷ ತರಬೇತಿ ನೀಡುತ್ತಿದೆ. Sri Chaitanya Institution ಮತ್ತು Infinity Learn ಸಹಭಾಗಿತ್ವದಲ್ಲಿ ನೀಡಲಾಗುತ್ತಿರುವ ಈ ತರಬೇತಿಗಳು ವಿದ್ಯಾರ್ಥಿಗಳಿಗೆ ಗುರಿ ಸಾಧನೆಯಲ್ಲಿ ಸಹಕಾರಿಯಾಗಿವೆ. ವಾಣಿಜ್ಯ ವಿದ್ಯಾರ್ಥಿಗಳಿಗೆ CA Foundation ಜೊತೆಗೆ UPSC ಪರೀಕ್ಷೆಗಳಿಗೂ ಮಾರ್ಗದರ್ಶನ ಒದಗಿಸಲಾಗುತ್ತಿದೆ.
ಅಕ್ಷಯ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕಾಲೇಜು, ಸ್ಥಾಪನೆಯಿಂದಲೇ ಶೈಕ್ಷಣಿಕ ಗುಣಮಟ್ಟ ಮತ್ತು ಫಲಿತಾಂಶಗಳಲ್ಲಿ ಉತ್ತಮ ಸಾಧನೆ ದಾಖಲಿಸಿಕೊಂಡಿದೆ. 2019ರಲ್ಲಿ ಪ್ರಾರಂಭವಾದ ಈ ಸಂಸ್ಥೆ, ಪ್ರಾಂತ್ಯದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಹೊಂದಿದೆ.
ಅನುಭವಸಂಪನ್ನ ಉಪನ್ಯಾಸಕರಿಂದ ಪಾಠಬೋಧನೆ, ನವೀನ ಅಧ್ಯಯನ ವಿಧಾನಗಳು ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ತರಬೇತಿಗಳ ಮೂಲಕ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಇಂತಹ ಪ್ರಯತ್ನಗಳ ಭಾಗವಾಗಿ 2025 - 26ರ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ಮೊದಲ ಬ್ಯಾಚನ್ನು ಯಶಸ್ವಿಯಾಗಿ ಇದೀಗ ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿಯನ್ನು ನೀಡುವ ಮೊದಲ ಹೆಜ್ಜೆಯನ್ನಿಟ್ಟು ವಿದ್ಯಾರ್ಥಿಗಳಲ್ಲಿ ಭರವಸೆಯನ್ನು ಮೂಡಿಸಿದೆ.
ಈ ಮಾರ್ಗದರ್ಶಿ ಉಚಿತ ತರಬೇತಿಯನ್ನು ನುರಿತ ತರಬೇತುದಾರರು ಹಾಗೂ ಅನುಭವಿ ಉಪನ್ಯಾಸಕ ವೃಂದದವರು ನಡೆಸಿಕೊಡಲಿದ್ದಾರೆ.
ಪ್ರತಿವಾರದ 5 ದಿನಗಳಲ್ಲಿ ನಡೆಯಲಿರುವ ಈ ತರಬೇತಿಯನ್ನು , ಅಭ್ಯಾಸ ಪರೀಕ್ಷೆ, ಸಮಸ್ಯೆಗಳ ಪರಿಹಾರ, ಸುಲಭ ವಿಧಾನಗಳು - ಹೀಗೆ ಹತ್ತು ಹಲವು ರೀತಿಯಲ್ಲಿ ಸಿಇಟಿ ಪರೀಕ್ಷಾರ್ಥಿಗಳಿಗೆ ಉಪಯೋಗವಾಗುವಂತೆ ಆಯೋಜಿಸಲಾಗಿದೆ.ಸರಿಸುಮಾರು 50 ಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಸಿಇಟಿ ಕ್ರ್ಯಾಶ್ ಕೋರ್ಸ್ ಗೆ ಅತ್ಯುತ್ಸಾಹದಿಂದ ಹಾಜರಾಗಿದ್ದಾರೆ.
ಗ್ರಾಮೀಣ ಭಾಗದಲ್ಲಿರುವ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ಆಸೆ, ಕನಸು ಮತ್ತು ಭವಿಷ್ಯಕ್ಕೆ ಭದ್ರ ಬುನಾದಿಯನ್ನು ಒದಗಿಸಿಕೊಡುವ ಸದುದ್ದೇಶದಿಂದ ಆರಂಭಗೊಂಡಿರುವ ಈ ಉಚಿತ ಸಿಇಟಿ ಕ್ರ್ಯಾಶ್ ಕೋರ್ಸ್ ಮೊದಲ ಹೆಜ್ಜೆಯಲ್ಲೇ ಹೆಗ್ಗುರುತನ್ನು ಮೂಡಿಸಿದೆ.ಮುಂದಿನ ಏಪ್ರಿಲ್ 15ರಿಂದ ಹತ್ತನೇ ತರಗತಿ ,ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಯ ಉಚಿತ ಬ್ರಿಡ್ಜ್ ಕೋರ್ಸ್ ಹಾಗೂ ಸ್ಪೋಕನ್ ಇಂಗ್ಲೀಷ್ ತರಗತಿ ನಡೆಯಲಿದ್ದು ಆಸಕ್ತರು ದಾಖಲಾತಿ ಮಾಡಿಕೊಳ್ಳಬಹುದು. 08251-230030, 7975719385, 80883 81678
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


