ಹಂಸ ಜ್ಯೋತಿ ಟ್ರಸ್ಟ್‌ ಸುವರ್ಣ ಸಂಭ್ರಮಾಚರಣೆ

Upayuktha
0

ಮಾ.16ರಂದು ರವೀಂದ್ರ ಕಲಾಕ್ಷೇತ್ರದಲ್ಲಿ15 ಜನ ಸಾಧಕೋತ್ತಮರಿಗೆ 'ಹಂಸ ಸಮ್ಮಾನ್' 2026 ಪ್ರಶಸ್ತಿ ಪ್ರದಾನ



ಬೆಂಗಳೂರು: ನಾಡಿನ ಸಾಂಸ್ಕೃತಿಕ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿರುವ ಹಂಸ ಜ್ಯೋತಿ ಟ್ರಸ್ಟ್ (ರಿ), ಬೆಂಗಳೂರು ಸಂಸ್ಥೆಯ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ‘ಹಂಸ ಜ್ಯೋತಿ ಸುವರ್ಣ ಸಂಭ್ರಮಾಚರಣೆ’ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 15 ಜನ ಸಾಧಕೋತ್ತಮರಿಗೆ ‘ಹಂಸ ಸಮ್ಮಾನ್ – 2026’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾರ್ಚ್ 16 ಸೋಮವಾರ ಸಂಜೆ 4.30ಕ್ಕೆ ನಗರದ ಜೆ.ಸಿ.ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ.


ಕಾರ್ಯಕ್ರಮವನ್ನು ಭಾರತದ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ಉದ್ಘಾಟಿಸಲಿದ್ದಾರೆ. ಸಮಾರಂಭಕ್ಕೆ ಹಿರಿಯ ರಂಗಸಂಘಟಕ ಮತ್ತು ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶ್ರೀನಿವಾಸ ಜಿ. ಕಪ್ಪಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.



ಮುಖ್ಯ ಅತಿಥಿಗಳಾಗಿ ಹಿರಿಯ ನಟ ಶ್ರೀನಾಥ್, ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ. ರಾಮಚಂದ್ರ, ಅಬಕಾರಿ ಉಪ ಆಯುಕ್ತ ಡಾ. ಬಿ.ಆರ್. ಹಿರೇಮಠ, ನಮ್ಮ ಆಶ್ರಮ ಸಂಸ್ಥಾಪಕ ಅಧ್ಯಕ್ಷ ಮೊಳಕಾಲ್ಮೂರು ಶ್ರೀನಿವಾಸಮೂರ್ತಿ, ಸಮಾಜಸೇವಕ ಎಸ್.ಟಿ. ಉದಯಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ. ಶಶಿಕಲಾ, ಗರುಡ ಇಂಟರ್‌ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಫರ್ನಿಚರ್ಸ್ ಪ್ರೈ.ಲಿ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೆ. ಗುರುಪ್ರಸಾದ್ ಭಾಗವಹಿಸಲಿದ್ದಾರೆ.


ವಿಶೇಷ ಆಹ್ವಾನಿತರಾಗಿ ನಿವೃತ್ತ ಪೊಲೀಸ್ ಅಧೀಕ್ಷಕ ಎನ್. ಜಗದೀಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಸಹಾಯಕ ನಿರ್ದೇಶಕ ಆರ್. ಚಂದ್ರಶೇಖರ್, ಲೆಕ್ಕ ಪರಿಶೋಧಕ ಕೆ. ಅಂಜನ್ ಕುಮಾರ್, ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಧರ್ಮದರ್ಶಿ ಎಸ್. ಶ್ರೀಪ್ರಸಾದ್, ಗುರುಶ್ರೀ ವಿಡಿಯೋಸ್ ಮಾಲೀಕ ಶ್ರೀನಿವಾಸಲು, ಸಮಾಜಸೇವಕ ಎಂ. ಜಯಕುಮಾರ್ ಉಪಸ್ಥಿತರಿರುತ್ತಾರೆ.


ಕಾರ್ಯಕ್ರಮದ ಅಂಗವಾಗಿ ಖ್ಯಾತ ಕಲಾವಿದರಿಂದ ಮಧುರ ಗೀತ ಮಂಜರಿ – ಹಳೆಯ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಹಾಗೂ ಸಾಮೂಹಿಕ ಶಾಸ್ತ್ರೀಯ ನೃತ್ಯ ಪ್ರದರ್ಶನವನ್ನು ಏರ್ಪಡಿಸಲಾಗಿದೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top