ಉಡುಪಿ ಶ್ರೀಕೃಷ್ಣ ಮಠದಲ್ಲಿ ವ್ಯಾಸರಾಜರ ಆರಾಧನೆ ಅಂಗವಾಗಿ ವಿಶೇಷ ಕಾರ್ಯಕ್ರಮ
ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹೋಳಿ ಹಬ್ಬದ ಅಂಗವಾಗಿ ಸಂಪ್ರದಾಯಬದ್ಧವಾಗಿ ಬಣ್ಣಗಳ ಮೆರವಣಿಗೆ ನಡೆಯಿತು.
ಪರ್ಯಾಯ ಪೂಜೆ ಸಲ್ಲಿಸುತ್ತಿರುವ ಶೀರೂರು ಮಠದ ಪರ್ಯಾಯ ಪೀಠಾಧೀಶರಾದ ವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಶ್ರೀಕೃಷ್ಣ ಮಠದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಹೋಳಿ ಬಣ್ಣಗಳನ್ನು ಹಿಡಿದು ಭಕ್ತರು ಮೆರವಣಿಗೆಯಾಗಿಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಸಂಪ್ರದಾಯದಂತೆ ದೇವಳದಿಂದ ಹೋಳಿ ಬಣ್ಣಗಳನ್ನು ಮರಳಿ ಶ್ರೀಕೃಷ್ಣ ಮಠಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಸೇರಿದಂತೆ ಮಠದ ಭಕ್ತರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವ್ಯಾಸರಾಜರ ಆರಾಧನೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ನಡೆದವು. ಪರ್ಯಾಯ ಪೀಠಾಧೀಶರಾದ ವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವ್ಯಾಸರಾಜರ ಗ್ರಂಥಗಳು ಹಾಗೂ ಭಾವಚಿತ್ರಗಳನ್ನು ಹೊತ್ತ ಮೆರವಣಿಗೆ ರಥಬೀದಿಯಲ್ಲಿ ಸಾಗಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ವಾಂಸರು ವ್ಯಾಸರಾಜರ ಜೀವನ ಹಾಗೂ ಅವರ ಕೃತಿಗಳ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ವಿದ್ವಾಂಸರಾದ ಡಾ. ಸಗ್ರಿ ಆನಂದ ತೀರ್ಥ ಆಚಾರ್ಯ, ವಿ. ಷಣ್ಮುಖ ಹೆಬ್ಬಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

