ಪುತ್ತೂರು: ಒಬ್ಬ ವಿದ್ಯಾರ್ಥಿಯಲ್ಲಿ ಶಿಕ್ಷಣ, ಆರೋಗ್ಯ, ಸಂಸ್ಕಾರವೆಂಬ ಮೂರು ವಿಚಾರಗಳಿದ್ದಾಗ ಮಾತ್ರ ಅವನು ಉತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮಲು ಸಾಧ್ಯ. ಶಿಕ್ಷಣದೊಂದಿಗೆ ಉತ್ತಮ ವ್ಯವಹಾರ ಜ್ಞಾನ ಅತ್ಯಗತ್ಯ. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದ್ದು ವಿದ್ಯಾರ್ಥಿಗಳಿಗೆ ಸಾಮಾಜಿಕ ಸೇವೆಗಳ ಬಗೆಗೆ ತಿಳಿಸಿಕೊಡುವುದು ಬಹಳಷ್ಟು ಅಗತ್ಯವಿದೆ. ದೇಹ ಭಕ್ತಿಯೊಂದಿಗೆದೇಶ ಭಕ್ತಿಯನ್ನು ಒಗ್ಗೂಡಿಸಿಕೊಳ್ಳಬೇಕು ಎಂದು ಭಾರತೀಯ ರೆಡ್‍ಕ್ರಾಸ್ ಸೊಸೈಟಿ ದಕ್ಷಿಣಕನ್ನಡ ಇದರ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.
ಇವರು ವಿವೇಕಾನಂದ ಸೆಂಟ್ರಲ್ ಸ್ಕೂಲ್ ಹಾಗೂ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಅಥಿತಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡುತ್ತಾ, ಮಾನವೀಯತೆಯನ್ನುಜಗತ್ತಿಗೆ ತಿಳಿಸಿ ಕೊಟ್ಟವರು ವಿವೇಕಾನಂದರು. ಭಾರತಒಂದು ಭದ್ರದೇಶ. ಆದರೆಇದನ್ನು ಬೇರ್ಪಡಿಸುವಕಾರ್ಯ ಬಹಳಷ್ಟು ಬಾರಿ ನಡೆದರೂ ಅದನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಹೆಣ್ಣನ್ನು ದೇವರೆಂದು ಪೂಜಿಸುವ ದೇಶ ನಮ್ಮದು. ರಾಮಾಯಣ, ಮಹಾಭಾರತದಂತಹ ಮಹಾಕಾವ್ಯಗಳನ್ನು ಜಗತ್ತಿಗೆ ಕೊಟ್ಟಿದೆ. ಭಾರತೀಯರಾದ ನಾವೆಲ್ಲರೂ ಒಗ್ಗಟ್ಟಾಗಿರುವುದು ಇಂದು ಅವಶ್ಯ ಎಂದು ಹೇಳಿದರು.
ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್‍ರಾವ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಎಂ ಕೃಷ್ಣ ಭಟ್ ಪ್ರಾಂಶುಪಾಲೆ ಸಿಂಧು, ಉಪ ಪ್ರಾಂಶುಪಾಲೆ ಶ್ರೀದೇವಿ ಭಗಿನಿ, ಶೈಕ್ಷಣಿಕ ಆಡಳಿತಾಧಿಕಾರಿ ಅನುರಾಧ ಉಪಸ್ಥಿತರಿದ್ದರು.
ಸೆಂಟ್ರಲ್ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಭರತ್ ಪೈ ಸ್ವಾಗತಿಸಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷೆ ವಸಂತಿ ವಂದಿಸಿ, ಜಯಶ್ರೀ ಕೆ. ಎನ್ ಹಾಗೂ ಲತಾಶಂಕರಿ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


