ಉಡುಪಿ: ಮಹಿಳಾ ಪರ ಚಿಂತನೆಗಳು ಕೇವಲ ಪಾಶ್ಚಿಮಾತ್ಯ ರಾಷ್ಟ್ರಗಳ ಕಲ್ಪನೆಯಲ್ಲ ಭಾರತೀಯ ತಾತ್ವಿಕ ಚಿಂತನೆಗಳಲ್ಲೂ ಮಹಿಳಾ ಪರ ಹೋರಾಟದ ಧ್ವನಿಗಳಿವೆ. ನಮ್ಮ ದೇಶದ ಪುರಾಣ ಮತ್ತು ಇತಿಹಾಸಗಳನ್ನು ವಾಸ್ತವಿಕ ದೃಷ್ಟಿಕೋನದಿಂದ ವಿಶ್ಲೇಷಿಸಿದರೆ ಇದನ್ನುಕಾಣಬಹುದು.ಈ ಚಿಂತನೆಯು ನಮ್ಮ ದೇಶದ ಸ್ತ್ರೀಯರಲ್ಲಿ ಆತ್ಮಭಿಮಾನವನ್ನು ಹೆಚ್ಚಿಸಿ ಸಂವಿಧಾನವು ಪ್ರತಿಪಾದಿಸುವ ಸಮಾನತೆಯನ್ನು ಪ್ರತಿಪಾದಿಸಲು ದಾರಿಯಾಗುತ್ತದೆ ಎಂದು ಚಿಂತಕಿ ಲೇಖಕಿ ಬಿ.ಎಂ ರೋಹಿಣಿ ಹೇಳಿದರು.
ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಉಡುಪಿ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಮಹಿಳಾ ದಿನಾಚರಣಾ ಸಪ್ತಾಹ -2026 ರ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಅತಿಥಿಯಾಗಿ ಮಾತನಾಡುತ್ತಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕರ್ನಾಟಕ ಸಭಾಪತಿ ಬಸರೂರು ರಾಜೀವ ಶೆಟ್ಟಿ, ಒಂದೂವರೆ ಶತಮಾನದಿಂದಲೇ ಭಾರತೀಯರೆಡ್‍ಕ್ರಾಸ್ ಸಂಸ್ಥೆ ಮಹಿಳಾ ಸಮಾನತೆಯನ್ನು ಪ್ರತಿಪಾದಿಸಿದೆ. ಡಾ.ಶಿವರಾಮ ಕಾರಂತರ ದೃಷ್ಟಿಕೋನ ಇದಕ್ಕೆ ಪೂರಕವಾಗಿದೆ ಎಂದರು.
ಆಶಯ ಭಾಷಣ ಮಾಡಿದ ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥಎ ಕ್ಕಾರು, ಯುವಜನತೆಗೆ ಮಹಿಳಾ ಸಬಲೀಕರಣದ ಮಹತ್ವವನ್ನು ತಿಳಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.ಕಾಲೇಜಿನ ಪ್ರಾಂಶುಪಾಲ ಪ್ರೊ.ಸೋಜನ್‍ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿನಿ ದಿಶಾ ಪ್ರಾರ್ಥಿಸಿದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಸ್ವಾಗತಿಸಿದರು. ಬಿ.ಎಂ ರೋಹಿಣಿ ಕಾರಂತರ ಮಹಿಳಾ ಪರ ಚಿಂತನೆಗಳು ಮತ್ತು ಪ್ರೊ.ದಿವ್ಯರಾಣಿ ಪ್ರದೀಪ್ ಮಹಿಳಾ ಸಬಲೀಕರಣದ ಸವಾಲುಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾಲೇಜಿನ ಮಹಿಳಾ ಸಂಘದ ಸಂಚಾಲಕಿ ವಿದ್ಯಾ ಡಿ ಸನ್ಮಾನ ಪತ್ರ ವಾಚಿಸಿದರು.
ಜಿಲ್ಲಾ ಲೇಖಕಿಯರ ವಾಚಕಿಯರ ಸಂಘದ ಸ್ಥಾಪಕಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ರೆಡ್ ಕ್ರಾಸ್ ಉಪಸಭಾಪತಿ ಡಾ.ಅಶೋಕ್‍ಕುಮಾರ್ ವೈ.ಜಿ, ರೆಡ್‍ಕ್ರಾಸ್ ಸಂಸ್ಥೆಯ ಖಜಾಂಚಿ ರಮಾದೇವಿ ಉಪಸ್ಥಿತರಿದ್ದರು.
ಉಪನ್ಯಾಸಕಿ ತ್ರಿವೇಣಿ ನಿರೂಪಿಸಿದರೆ ಜಿಲ್ಲಾ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷೆ ಡಾ.ನಿಕೇತನ ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


