ವಿಶ್ವ ಮಹಿಳಾ ದಿನಾಚರಣೆ: ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸನ್ಮಾನ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಹಾಗೂ ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರಿ ಸಂಘ ರಿಜಿಸ್ಟರ್ ಮಂಗಳೂರು ಜಂಟಿ ಆಶ್ರಯದಲ್ಲಿ ಸಂಘದ ಕಡೆಮೊಗರು ಸಭಾಂಗಣದಲ್ಲಿ ಮಾರ್ಚ್ 8ರಂದು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಹಿತಿ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರನ್ನು ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷರಾದ ದಿನಕರ್ ಕುಲಾಲ್ ವಹಿಸಿದರು. ಮುಖ್ಯ ಅತಿಥಿಗಳಾಗಿ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬಿತ್, ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಎಲ್, ದ.ಕ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರಿ ಸಂಘ ಚಾರ್ಮೇನ್ ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ರಿಜಿಸ್ಟರ್ ಮಂಗಳೂರು ಅಧ್ಯಕ್ಷರಾದ ಎ. ಜನಾರ್ಧನ್, ಪದಾಧಿಕಾರಿಗಳಾದ ಪುಂಡಲೀಕ ಸುವರ್ಣ, ದಿವಾಕರ್ ಎಂ, ಅಬ್ದುಲ್ ಮೊಯಿದ್ದೀನ್ ಕಾರ್ಕಳ, ಕೆ ವಿ .ರಾಜಗೋಪಾಲ್, ಕಿರಣ್ ರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾಧವರವರು ಕಾರ್ಯಕ್ರಮ ನಿರೂಪಿಸಿದರು. ರಾಜಗೋಪಾಲ್ ಸ್ವಾಗತಿಸಿದರು. ಕಿರಣ್ ರಾಜ್ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top