ಶಕ್ತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Upayuktha
0


ಮಂಗಳೂರು: ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಈ ಸಂದರ್ಭದಲ್ಲಿ ಗುರುತಿಸಿ ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಮಹಿಳಾ ಪೋಷಕರಾದ ಶ್ರೀಮತಿ ಪೂರ್ಣಿಮಾ ಭಟ್ (ಸೀನಿಯರ್ ಇನ್ಸ್‌ಪೆಕ್ಟರ್ ಆಫ್ ಮೋಟಾರ್ ವೆಹಿಕಲ್ಸ್, ಆರ್‌ಟಿಒ ಮಂಗಳೂರು), ಡಾ. ಪರಿಣಿತ ಸಂಜೀವ್ ನಾಯ್ಕ್ (ಎಂ.ಬಿ.ಬಿ.ಎಸ್., ಎಂ.ಡಿ., ಫಾರೆನ್ಸಿಕ್ ಮೆಡಿಸಿನ್), ಮಾನಸ ಪುದುವೆಟ್ಟು (ಸ್ಥಾಪಕಿ, ಡಿಜಿಟಲ್ ನ್ಯೂ ಏಜ್ ಮೀಡಿಯಾ– ಡೇ ಟು ಡೇ ನ್ಯೂಸ್), ಮಹಾಲಕ್ಷ್ಮಿ ಮೆಹರಾಜ್ (ಮ್ಯಾನೇಜಿಂಗ್ ಡೈರೆಕ್ಟರ್, ಮಹಾಲಕ್ಷ್ಮಿ ಎಂಟರ್‌ಪ್ರೈಸಸ್ ಹಾಗೂ ಕರ್ನಾಟಕ ಕ್ಷತ್ರಿಯ ಮಹಿಳಾ ಸಂಘದ ಅಧ್ಯಕ್ಷರು) ಮತ್ತು ಪುನೀತ ವೈ.ಬಿ. (ಪೊಲೀಸ್ ಕಾನ್‌ಸ್ಟೆಬಲ್, ಬಂಟ್ವಾಳ ಪೊಲೀಸ್ ಠಾಣೆ) ಅವರನ್ನು ಗೌರವಿಸಲಾಯಿತು.


ಗೌರವ ಸ್ವೀಕರಿಸಿದ ಅತಿಥಿಗಳು ತಮ್ಮ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಂಡರು. ತಾವು ಆಯ್ಕೆ ಮಾಡಿಕೊಂಡ ವೃತ್ತಿಯ ಹಿನ್ನಲೆ, ಮಹಿಳೆಯಾಗಿ ಸಮಾಜದಲ್ಲಿ ಎದುರಿಸಿದ ಸವಾಲುಗಳು ಹಾಗೂ ಅವುಗಳನ್ನು ಧೈರ್ಯದಿಂದ ಎದುರಿಸಿ ಸಾಧನೆ ಮಾಡಿದ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.


ಇದೇ ಸಂದರ್ಭದಲ್ಲಿ ಶಕ್ತಿ ಸಂಸ್ಥೆಯ ಮಹಿಳಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗೆ ಉಡುಗೊರೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮಹಿಳಾ ಸಿಬ್ಬಂದಿಗಾಗಿ ವಿವಿಧ ಮನರಂಜನಾ ಹಾಗೂ ಪ್ರೇರಣಾದಾಯಕ ಚಟುವಟಿಕೆಗಳನ್ನು ಆಯೋಜಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top