ವಿವೇಕಾನಂದ ಕಾಲೇಜಿನಲ್ಲಿ ಪತ್ರಕರ್ತ ಮೇಷ್ಟ್ರು ಕಾರ್ಯಾಗಾರ ಕಾರ್ಯಕ್ರಮ

Upayuktha
0


ಪುತ್ತೂರು: ವಿದ್ಯಾರ್ಥಿ ಬದುಕಿನಲ್ಲಿ ಕಷ್ಟ ಪಟ್ಟು ಕಲಿತರೆ ಮುಂದಿನ ಉದ್ಯೋಗ ಭವಿಷ್ಯದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಇದರೊಂದಿಗೆ ನಮ್ಮ ಕೆಲಸದಲ್ಲೂ ಹೆಚ್ಚಿನ ಕ್ರಿಯಾಶೀಲತೆಯನ್ನು ಹೊಂದಬೇಕು. ಶ್ರಮದ ಕಲಿಕೆಯ ಜೊತೆಗೆ ಕ್ರಿಯಾಶೀಲತೆಯನ್ನು ಹೊಂದಿದರೆ ಉತ್ತಮ ಉದ್ಯೋಗ ಪಡೆಯಲು ಸಾಧ್ಯ ಎಂದು ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿ ಹಾಗೂ ಎಕ್ಸೆಲ್ ಗ್ರೂಪ್ ಆಫ್ ಇನ್ಸಿಟ್ಯೂಷನ್ಸ್, ಗುರುವಾಯನಕೆರೆ ಇಲ್ಲಿನ ಡಿಜಿಟಲ್ ಮೀಡಿಯಾ ಎಕ್ಸಿಕ್ಯೂಟಿವ್ ಶರತ್ ಕೆ. ಎನ್ ಹೇಳಿದರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಐಕ್ಯೂಎಸಿ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ನಡೆದ "ಪತ್ರಕರ್ತ ಮೇಷ್ಟ್ರು” ಕಾರ್ಯಾಗಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.


ಕಾಲೇಜಿನ ಸ್ನಾತಕೋತ್ತರ ವಿಭಾಗದ ನಿರ್ದೇಶಕಿ ಡಾ. ವಿಜಯ ಸರಸ್ವತಿ ಬಿ ಮಾತನಾಡುತ್ತಾ, ಬದುಕಿನ ಅನುಭವವನ್ನು ಮುಂದಿನ ಪೀಳಿಗೆಗೆ ತಿಳಿಸುವುದರ ಜೊತೆಗೆ ಹೊರಗಿರುವ ಜಗತ್ತು ಎಷ್ಟು ಸವಾಲನ್ನು ಹೊಂದಿದೆ ಎನ್ನುವುದನ್ನು ತಿಳಿಯಲು ಈ ಕಾರ್ಯಕ್ರಮ ಸಹಾಯಕ. ಹೊಸ ವಿಚಾರದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡಷ್ಟು ಇನ್ನಷ್ಟು ಬೆಳೆಯಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿ ನಾವು ಎಷ್ಟು ಹೊಸ ವಿಷಯವನ್ನು ಕಲಿಯುತ್ತೇವೋ ಅವು ನಮ್ಮ ಭವಿಷ್ಯ ಏಳಿಗೆಗೆ ಮುಖ್ಯ ಪಾತ್ರ ವಹಿಸುತ್ತದೆ ಎಂದರು.


ಕಾಲೇಜಿನ ಪರಿಕ್ಷಾಂಗ ಕುಲಸಚಿವ ಡಾ. ಶ್ರೀಧರ್ ಹೆಚ್. ಜಿ ಮಾತನಾಡುತ್ತಾ, ನಮ್ಮ ಬದುಕಿಗೆ ಅನುಭವವೇ ದಾರಿದೀಪ. ಯಾವಾಗ ವಿದ್ಯಾರ್ಥಿಗಳು ತಪ್ಪು ಮಾಡುತ್ತಾರೋ ಆಗ ಇನ್ನಷ್ಟು ಬೆಳೆಯಲು ಸಾಧ್ಯವಾಗುವುದು. ಅವಕಾಶವನ್ನು ಸೃಷ್ಟಿ ಮಾಡುವುದರೊಂದಿಗೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವುದನ್ನು ವಿದ್ಯಾರ್ಥಿಗಳು ಕಲಿಯಬೇಕು. ವಿದ್ಯಾರ್ಥಿ ಜೀವನದಲ್ಲಿ ಕಷ್ಟ ಪಟ್ಟಷ್ಟು ಮುಂದಿನ ಭವಿಷ್ಯದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ ಎಂದರು.


ವೇದಿಕೆಯಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಶ್ವೇತಾ, ಹವ್ಯಶ್ರೀ ಹಾಗೂ ದಿವ್ಯಶ್ರೀ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಥಮ ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿನಿ ಧನ್ಯಶ್ರೀ ವಂದಿಸಿ, ವಿದ್ಯಾಶ್ರೀ ಸ್ವಾಗತಿಸಿ, ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಫೋಟೋಶಾಪ್ಕು ರಿತು ಪ್ರಾಯೋಗಿಕ ಕಾರ್ಯಾಗಾರ ನಡೆಯಿತು.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top