ಮಲಯಾಳ ಭಾಷಾ ಮಸೂದೆ ವಿರೋಧಿಸಿ ಕಾಸರಗೋಡಿನಲ್ಲಿ ಕನ್ನಡಿಗರ ಪ್ರತಿಭಟನೆ

Upayuktha
0

ಹಕ್ಕುಗಳಿಗೆ ಧಕ್ಕೆ ತಂದರೆ ಉಗ್ರ ಹೋರಾಟ: ಡಾ. ವಾಮನರಾವ್ ಬೇಕಲ್





ಕಾಸರಗೋಡು: ಕೇರಳ ಸರ್ಕಾರದ ಮಲಯಾಳ ಭಾಷಾ ಮಸೂದೆ ಕಾಸರಗೋಡಿನ ಕನ್ನಡಿಗರ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಡಾ. ವಾಮನರಾವ್ ಬೇಕಲ್ ಎಚ್ಚರಿಸಿದರು.


ಕಾಸರಗೋಡಿನ ಕನ್ನಡ ಭವನದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಕನ್ನಡ ಧ್ವಜಾರೋಹಣದ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.


ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯಗೊಳಿಸುವ ಪ್ರಸ್ತಾಪದಿಂದ ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಪ್ರದೇಶಗಳನ್ನು ಹೊರತುಪಡಿಸಬೇಕು ಎಂದು ಅವರು ಆಗ್ರಹಿಸಿದರು. ಗಡಿನಾಡಿನಲ್ಲಿ ಭಾಷಾ ಅಲ್ಪಸಂಖ್ಯಾತರಿಗೆ ಮಲಯಾಳಂ ಕಡ್ಡಾಯಗೊಳಿಸುವುದು ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೇಳಿದರು.


ಕನ್ನಡಿಗರ ಹಕ್ಕು-ಸವಲತ್ತುಗಳಿಗೆ ಧಕ್ಕೆ ತಂದಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು.


ಸಭೆಗೆ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು.


ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರು ಮಸೂದೆಯ ಸಾಧಕ-ಬಾಧಕಗಳ ಕುರಿತು ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಗುರುರಾಜ್, ಉಷಾ ಕಿರಣ್ ಹಾಗೂ ಕು. ಮೋಕ್ಷ ಅವರು ಕನ್ನಡ ಗೀತೆಗಳನ್ನು ಗಾಯನ ಮಾಡಿದರು.


ಕನ್ನಡ ಭವನದ ಕೋಶಾಧಿಕಾರಿ ಸಂಧ್ಯಾ ರಾಣಿ ಟೀಚರ್ ಸ್ವಾಗತಿಸಿ, ಕಾರ್ಯದರ್ಶಿ ವಸಂತ ಕೆರೆಮನೆ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top