ಹಾಸನ: ಕರ್ನಾಟಕ ಜಾನಪದ ಅಕಾಡೆಮಿಯ 2025ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆ ಆಗಿದ್ದ ಹಾಸನದ ಗೀಗೀ ಪದ ಲಾವಣಿ ತತ್ವಪದ ಮತ್ತು ಭಜನೆ ಗಾಯಕ ಯೋಗೇಂದ್ರ ದುದ್ದ ರವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಗೌರವ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಶಿವರಾಜ ಎಸ್. ತಂಗಡಗಿ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರು ಡಾ. ಗೊಲ್ಲಹಳ್ಳಿ ಶಿವಪ್ರಸಾದ್ ಪ್ರಶಸ್ತಿ ಪ್ರದಾನ ಮಾಡಿದರು.
ಜನಪದ ಕ್ಷೇತ್ರದ ತತ್ವಪದ ಜನಪದ ಹಾಡುಗಾರಿಕೆಯಲ್ಲಿ ಕಳೆದ 40-45 ವರ್ಷಗಳಿಂದ ತೊಡಗಿಸಿ ಕೊಂಡಿರುವ ಯೋಗೇಂದ್ರ ದುದ್ಧ ರವರಿಗೆ ಪ್ರಶಸ್ತಿ ಸಂದಿರುವುದಕ್ಕೆ ಸಾಹಿತಿ ಗೊರೂರು ಅನಂತರಾಜು, ಶಾರದ ಕಲಾಸಂಘದ ಅಧ್ಯಕ್ಷರು ಎಚ್.ಜಿ. ಗಂಗಾಧರ್, ಕದಂಬ ಸೈನ್ಯ ಜಿಲ್ಲಾಧ್ಯಕ್ಷರು ಎ.ಹೆಚ್. ಗಣೇಶ್, ಅಂಕಪುರ ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


