ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 5 ನೇ ರ‍್ಯಾಂಕ್

Upayuktha
0



ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಫೆಬ್ರವರಿ 2025 ರಲ್ಲಿ ನಡೆಸಿದ ಬಿ.ಎಡ್. ಪರೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸನ್ ಸಿಕ್ವೇರಾ, ಶೇ. 92.33 ಅಂಕಗಳನ್ನು ಪಡೆದು 5ನೇ ರ‍್ಯಾಂಕ್‌ನ್ನು ಪಡೆದಿರುತ್ತಾರೆ. ಪರೀಕ್ಷೆಗೆ ಹಾಜರಾದ ಎಲ್ಲಾ 50 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶೇ 100 ಫಲಿತಾಂಶವನ್ನು ದಾಖಲಿಸಿರುತ್ತಾರೆ.


ವಿದ್ಯಾರ್ಥಿಗಳನ್ನು, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರನ್ನು ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್ ರವರು ಅಭಿನಂದಿಸಿರುತ್ತಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top