ಆವಿಷ್ಕಾರದಿಂದ ಪರಿಣಾಮದವರೆಗೆ- ವಿಶೇಷ ಉಪನ್ಯಾಸ

Upayuktha
0


ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಉದ್ಯೋಗ ಮಾಹಿತಿಘಟಕ, ಐ.ಐ.ಸಿ., ಸೂಕ್ಷ್ಮಾಣು ಜೀವಶಾಸ್ತ್ರ ಹಾಗೂ ಆಂತರಿಕ ಗುಣಮಟ್ಟ ಖಾತ್ರಿಕೋಶದ ಸಹಯೋಗದಲ್ಲಿ ಶಿವರಾಮ ಕಾರಂತ ಸಭಾ ಭವನದಲ್ಲಿಆವಿಷ್ಕಾರದಿಂದ ಪರಿಣಾಮದವರೆಗೆ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 


ಯೆನಪೋಯಾ ವಿಶ್ವವಿದ್ಯಾಲಯದ ತಾಂತ್ರಿಕ ಇನ್ಕ್ಯೂಬೇಟರ್ ವಿಜ್ಞಾನಿ ಡಾ. ವಿವೇಕ್‍ ಘಾಟೆ, ಗಣಕಯಂತ್ರ ವಿಭಾಗದ ಕ್ಷೇತ್ರದಲ್ಲಿನ ಸಂಶೋಧನೆ ಮತ್ತು ತಂತ್ರಜ್ಞಾನದ ವಿವಿಧ ಸ್ತರಗಳು ಹಾಗೂ ಬೌದ್ಧಿಕ ಹಕ್ಕುಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ತಾಂತ್ರಿಕ ಸಂಶೋಧನಾ ಕ್ಷೇತ್ರದಲ್ಲಿ ಬೌದ್ಧಿಕ ಹಕ್ಕಗಳ ಬಗ್ಗೆ ವಿದ್ಯಾರ್ಥಿ ದೆಸೆಯಲ್ಲೇ ಮಾಹಿತಿ ಪಡೆದುಕೊಳ್ಳುವುದು ಸೂಕ್ತ. ಆಧುನಿಕತೆಗೆ ತಕ್ಕಂತೆ ಹೊಸ ದೃಷ್ಟಿಕೋನದಲ್ಲಿ ಸಮಾಜಕ್ಕೆ ಪೂರಕವಾದ ಆವಿಷ್ಕಾರಗಳನ್ನು ಕೈಗೊಳ್ಳುವುದು ಮುಖ್ಯವಾಗುತ್ತದೆ. ಅಲ್ಲದೇ, ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆಲೋಚನೆ ಬೆಳೆಸಿಕೊಳ್ಳುವುದು ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. 


ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಭಾರತಿ ಪ್ರಕಾಶ್ ಸ್ವಾಗತಿಸಿದರು. ಐ.ಐ.ಸಿ. ಅಧ್ಯಕ್ಷೆ ಡಾ. ಭಾರತಿ ಪಿಲಾರ್ ವಂದಿಸಿದರು. ಇದೇ ವೇಳೆ ಐ.ಐ.ಸಿ. ಸಂಯೋಜಕಡಾ. ವೀರಭದ್ರಪ್ಪ, ಬಿ.ಬಿ.ಎ. (ಪ್ರಯಾಣ ಮತ್ತು ಪ್ರವಾಸ) ವಿಭಾಗದ ಮುಖ್ಯಸ್ಥ ಪ್ರೊ. ಜಗದೀಶ್, ಉಪನ್ಯಾಸಕಿ ಸುಮಂಗಳ ಸಿ. ಎಚ್. ಸೇರಿದಂತೆ ನಾನಾ ವಿಭಾಗದಉಪನ್ಯಾಸಕರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top