ವಾರ್ಷಿಕ ಕ್ರೀಡೋತ್ಸವ ಉತ್ಸವವಿದ್ದಂತೆ: ಶಿವರಾಮ ಕೆ.

Upayuktha
0

ಮಂಗಳೂರು: ವಾರ್ಷಿಕ ಕ್ರೀಡಾಕೂಟ ಉತ್ಸವವಿದ್ದಂತೆ. ವೃತ್ತಿ ಹಾಗೂ ಬದುಕುಎರಡರಲ್ಲೂ ಉನ್ನತ ಮಟ್ಟಕ್ಕೇರಲು ಕ್ರೀಡೆ ಸಹಕಾರಿ ಎಂದು ಸುರತ್ಕಲ್ ಎನ್ಐಟಿಕೆ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಶಿವರಾಮ ಕೆ. ಹೇಳಿದರು. 


ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆ ಎಂದರೆ ಕೇವಲ ಆಟವಲ್ಲ; ಬದುಕಿನಲ್ಲಿ ಸೋಲನ್ನು ಸ್ವೀಕರಿಸುವುದನ್ನು ಕಲಿಸಿಕೊಡುತ್ತದೆ. ಆರೋಗ್ಯ ಹಾಗೂ ಭವಿóಷ್ಯದ ದೃಷ್ಟಿಯಿಂದ ಕ್ರೀಡೆ ಬಹಳ ಸಹಕಾರಿಯಾಗಿದೆ. ಹೊರಾಂಗಣ ಆಟಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿಎಂದು ಹೇಳಿದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿಗೌಡಎಸ್., ಕ್ರೀಡೆ ವ್ಯಕ್ತಿತ್ವರೂಪಿಸುವಲ್ಲಿ ಪ್ರಯೋಜನಕಾರಿಯಾಗಿದೆ. ಆಟಗಳ ಮೂಲಕ ಸೋಲು-ಗೆಲುವು ಎರಡನ್ನೂ ಸಮಾನಾವಾಗಿ ಸ್ವೀಕರಿಸುವ ಮೂಲಕ ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಬದುಕಿನಲ್ಲೂ ಸೋಲು-ಗೆಲುವು ಸರ್ವೇ ಸಾಮಾನ್ಯ. ಇವೆರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಸೋಲಿನಿಂದ ಕಲಿತ ಪಾಠ ಬದುಕಿನುದ್ದಕ್ಕೂ ನೆನಪಿನಲ್ಲಿರುತ್ತದೆಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 


ಇದೇ ವೇಳೆ, ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ನಾನಾ ಕ್ರೀಡೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ತೃತೀಯ ಬಿಬಿಎ ವಿದ್ಯಾರ್ಥಿ ಬಿಂದಿಯಾ ಪೂಜಾರಿಕ್ರೀಡಾ ಪ್ರಮಾಣ ವಚನ ಬೋಧಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕೇಶವ ಮೂರ್ತಿ, ದೈಹಿಕ ಶಿಕ್ಷಣ ನಿರ್ದೇಶಕ ದಿವಾಕರ್, ದೈಹಿಕ ನಿವೃತ್ತ ನಿರ್ದೇಶಕ ದಿವಾಕರ್, ಇಂಗ್ಲಿಷ್ ವಿಭಾಗದ ನಿವೃತ್ತ ಪ್ರಾಧ್ಯಾಪಕ ಶ್ಯಾಮ್ ಭಟ್, ಕ್ರೀಡಾ ವಿಭಾಗದ ಕಾರ್ಯದರ್ಶಿ ತೃತೀಯ ಬಿಎ ವಿದ್ಯಾರ್ಥಿ ವಿಜಯ್, ಸೇರಿದಂತೆ ನಾನಾ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top