ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳು: ಸ್ಮಾರ್ಟ್ ತರಗತಿ ಉದ್ಘಾಟನೆ

Upayuktha
0


ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟಿಸಲಾಯಿತು.


ಮಂಗಳೂರು ಆರ್.ಆರ್.ವಿ.ಎಸ್. ಮತ್ತು ಕೋ ಎಲ್.ಎಲ್.ಪಿ.ಚಾರ್ಟರ್ಡ್ ಅಕೌಂಟೆಂಟ್ಸ್ ಪಾಲುದಾರ ವಿಘ್ನೇಶ ಎಂ. ಅವರು ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತ ಮತ್ತು ಆವಶ್ಯಕತೆ ಇದೆ. ಪರಿಣಾಮಕಾರಿ ಶಿಕ್ಷಣಕ್ಕೆ ಒತ್ತು ನೀಡಿದ ಆಡಳಿತ ಮಂಡಳಿ ಉತ್ತಮ ಭವಿಷ್ಯ ರೂಪಿಸುವ ಕೈಂಕರ್ಯ ಮಾಡಿದೆ ಎಂದು ಹೇಳಿದರು.


ಸಂಸ್ಥೆ ಕಾರ್ಯಾಧ್ಯಕ್ಷ ಗಣೇಶಮೋಹನ‌ ಕಾಶಿಮಠ ಅಧ್ಯಕ್ಷತೆ ವಹಿಸಿ, ಮಾತನಾಡಿ, ಈ ತಾಂತ್ರಿಕ ವ್ಯವಸ್ಥೆಯನ್ನು ಶಿಕ್ಷಕರು ಬಳಸಿ, ವಿದ್ಯಾರ್ಥಿಗಳು ಸದುಪಯೋಗ ಪಡಿಸಲು ಪ್ರೇರೇಪಿಸಬೇಕು. ವಿದ್ಯಾರ್ಥಿಗಳು ಪ್ರಯೋಜನ‌ ಪಡೆದುಕೊಳ್ಳಬೇಕು ಎಂದರು.


ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ ಮಾತನಾಡಿ, ಶೈಕ್ಷಣಿಕ ಸಂಸ್ಥೆಯು ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಸ್ಥೆಯ ಮಕ್ಕಳು ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.


ಕೋಶಾಧಿಕಾರಿ ಉದಯಶಂಕರ್ ನೀರ್ಪಾಜೆ, ಟ್ಯಾಗ್ ಹೈವ್ ಮಾರ್ಕೆಟಿಂಗ್ ಮೆನೇಜರ್ ದಿನೇಶ್ ಕೊಡ್ಕಣಿ, ಪ್ರಾಂಶುಪಾಲ ಸಂದೀಪ್ ಆಚಾರ್ಯ ಉಪಸ್ಥಿತರಿದ್ದರು.


ಶಿಕ್ಷಕಿ ಅಕ್ಷತಾ ಸ್ವಾಗತಿಸಿ, ಉಪನ್ಯಾಸಕಿ ಮೇಘನಾ ವಂದಿಸಿದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top