ಎಸ್‌ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಗ್ರಂಥಾಲಯ ಮತ್ತು ಸಭಾಂಗಣ ಉದ್ಘಾಟನೆ

Upayuktha
0


ಮಂಗಳೂರು: ನಗರದ ಎಸ್‌ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ಗ್ರಂಥಾಲಯ ಮತ್ತು ಸಭಾಂಗಣದ ಉದ್ಘಾಟನಾ ಕಾರ್ಯಕ್ರಮವು 23 ಮಾರ್ಚ್ ಸೋಮವಾರ ಭವ್ಯವಾಗಿ ನಡೆಯಿತು. ಈ ಕಾರ್ಯಕ್ರಮವು ಕಾಲೇಜಿನ ಇತಿಹಾಸದಲ್ಲಿ ಮಹತ್ವದ ಘಟ್ಟವಾಗಿ ಪರಿಣಮಿಸಿತು.


ಕಾರ್ಯಕ್ರಮವನ್ನು ಎಸ್‌ ಸಿ ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಯಾದ ಯು. ಕೆ. ಖಾಲಿದ್ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ನೂತನ ಗ್ರಂಥಾಲಯ ಮತ್ತು ಸಭಾಂಗಣವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾದೇವತೆ ಸರಸ್ವತಿ ದೇವಿಯ ಭಾವಚಿತ್ರಕ್ಕೆ ಆರತಿ ಬೆಳಗಿ ಪುಷ್ಪಾರ್ಚನೆ ಸಲ್ಲಿಸಲಾಯಿತು. ನಂತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುದೀಕ್ಷಾ ಹಾಗೂ ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ಮಂಜುಶ್ರೀ ಅವರು ಭಕ್ತಿಭಾವಪೂರ್ಣವಾಗಿ ಸರಸ್ವತಿ ವಂದನೆಯನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು.


ತದನಂತರ ನೂತನ ಸಭಾಂಗಣವನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರಾದ ಡಾ. ಆಶಾಲತಾ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಹಾರ್ದಿಕ್ ಪಿ. ಚೌಹಾಣ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಸಭಾಂಗಣಕ್ಕೆ ಅಧಿಕೃತ ಚಾಲನೆ ನೀಡಿದರು. ಉತ್ತಮ ಗ್ರಂಥಾಲಯವು ವಿದ್ಯಾರ್ಥಿಗಳ ಜ್ಞಾನವೃದ್ಧಿಗೆ ಮೂಲಸ್ತಂಭವಾಗಿದ್ದು, ಸಭಾಂಗಣವು ವಿದ್ಯಾರ್ಥಿಗಳ ಪ್ರತಿಭೆ ಹೊರಹಾಕಲು ಉತ್ತಮ ವೇದಿಕೆಯಾಗಲಿದೆ.



ಈ ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಸುಚಿತ್ರ ಪಿ. ಶೆಟ್ಟಿ, ಗ್ರಂಥಪಾಲಕರಾದ ಹೇಮಾವತಿ, ಸಂಸ್ಥೆಯ ಪ್ರವೇಶಾಧಿಕಾರಿ ಯಶ್ವಿನ್, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಅಶ್ವಿನಿ ಶರ್ಮ, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಹಾಗೂ ಕಾಲೇಜಿನ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ನೂತನ ಗ್ರಂಥಾಲಯವು ವಿದ್ಯಾರ್ಥಿಗಳಿಗೆ ಶಾಂತ ವಾತಾವರಣದಲ್ಲಿ ಅಧ್ಯಯನ ಮಾಡಲು ಅನುಕೂಲಕರವಾಗಿದ್ದು, ವಿವಿಧ ವಿಷಯಗಳ ಪುಸ್ತಕಗಳನ್ನು ಒಳಗೊಂಡಿದೆ. ಸಭಾಂಗಣ ವಿದ್ಯಾರ್ಥಿಗಳ ಕನಸುಗಳಿಗೆ ಬೆಕ್ಕೆ ನೀಡುವ ಸಲ ಇಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮವು ಅನುಭವ ಕಲಿಕೆಯಾಗಲಿ ಈ ವೇದಿಕೆಯಿಂದ ಹೊರಡುವ ಮಾತುಗಳು ಸಮಾಜಕ್ಕೆ ಬೆಳಕಾಗಲಿ. ಈ ಹೊಸ ಸೌಕರ್ಯಗಳು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಸಹಕಾರಿಯಾಗಲಿವೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.


ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಸಿಹಿತಿಂಡಿಯನ್ನು ಹಂಚಲಾಯಿತು. ಸಂಪೂರ್ಣ ಕಾರ್ಯಕ್ರಮವು ಸಂಭ್ರಮ ಮತ್ತು ಹರ್ಷೋದ್ಗಾರಗಳ ನಡುವೆ ನೆರವೇರಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top