ಇನ್ಸಿಡೆಂಟ್ 2026 ರಲ್ಲಿ ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ

Upayuktha
0


ಕಾರ್ಕಳ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಆಯೋಜಿಸಿದ ವಾರ್ಷಿಕ ಸಾಂಸ್ಕೃತಿಕ ಉತ್ಸವವಾದ 'ಇನ್ಸಿಡೆಂಟ್ 2026' ರಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿರುವರು. ಸಂಗೀತ ವಿಭಾಗದಲ್ಲಿ, ಸ್ಟೀರಿಯೊ ಕ್ಲಬ್ ನ ಆದಿತ್ಯ ಪಿ. ಭಟ್ ರಾಗ ರಾಪ್ಸೋಡಿ ಎಂಬ ಏಕವ್ಯಕ್ತಿ ಗಾಯನ ಸ್ಪರ್ಧೆಯಲ್ಲಿ ಎರಡನೇ ಬಹುಮಾನವನ್ನು ಪಡೆದರು. ಇವರಿಗೆ ಆಶ್ವಿತ್ ಪ್ರಭು ಹಿನ್ನಲೆ ಸಂಗೀತದಲ್ಲಿ ಸಾಥ್ ನೀಡಿದರು. ಕಲಾಂಜಲಿ ಕ್ಲಬ್ ನ ಟೀಮ್ ಆರ್ ಎಫ್ ಸಿ 'ಪ್ರೊಮ್ನೇಡ್' ವೆಸ್ಟರ್ನ್ ಗ್ರೂಪ್ ಡ್ಯಾನ್ಸ್ ಸ್ಪರ್ಧೆಯಲ್ಲಿ ಮೊದಲ ಸ್ಥಾನವನ್ನು ಗಳಿಸಿತು. ಟೀಮ್ ತಾಲೀಮ್ ಬೀದಿ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಗೆದ್ದುಕೊಂಡಿತು.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top