ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 46ನೇ ಕಂಟೋನ್ಮೆಂಟ್ ವಾರ್ಡಿನ ಪಾಂಡೇಶ್ವರ ಶಿವನಗರದಲ್ಲಿ 1.23 ಕೋಟಿ ರೂ. ವಿಶೇಷ ಅನುದಾನದಲ್ಲಿ ತಡೆಗೋಡೆ ನಿರ್ಮಾಣವಾಗಲಿದ್ದು ಶಾಸಕ ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ಶಿಲಾನ್ಯಾಸ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ಪ್ರತಿ ವರ್ಷ ಮಳೆಗಾಲದಲ್ಲಿ ಈ ಭಾಗದ ಜನರು ನೆರೆ ಸಮಸ್ಯೆಯಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಹಿಂದೆಯೇ ಕೆಲವು ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣವಾಗಿದ್ದರೂ ಅನಿವಾರ್ಯ ಕಾರಣಗಳಿಂದ ಒಂದಷ್ಟು ಬಾಕಿ ಇದ್ದು, ಇದೀಗ ಆ ಕಾಮಗಾರಿಯನ್ನೂ ಸಹ ಕೈಗೆತ್ತಿಕೊಳ್ಳಲಾಗಿದೆ. ಮುಂಬರುವ ಮಳೆಗಾಲದಲ್ಲಿ ಇಲ್ಲಿನ ಜನರಿಗೆ ಯಾವುದೇ ತೊಂದರೆಯಾಗಬಾರದು ಎಂಬ ಕಾಳಜಿಯಿಂದ ಹಿರಿಯ ಅಧಿಕಾರಿಗಳು ನೀಡಿರುವ ಸಮಗ್ರ ವರದಿಗೆ ಅನುಗುಣವಾಗಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ ಅನುದಾನವನ್ನು ಒದಗಿಸಿಕೊಡಲಾಗಿದೆ ಎಂದರು.
ಈ ಭಾಗದ ಜನರ ಸಮಸ್ಯೆ ಬಗೆಹರಿಯಬೇಕೆಂಬುದೇ ನಮ್ಮೆಲ್ಲರ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ನಿಕಟ ಪೂರ್ವ ಪಾಲಿಕೆ ಸದಸ್ಯ ಹಾಗೂ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ ರವರ ವಿಶೇಷ ಪ್ರಯತ್ನವಿದೆ ಎಂದರು. ಬಿಜೆಪಿ ಪ್ರಮುಖರಾದ ನಾಮದೇವ್, ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಕಿರಣ್ ರೈ, ಪ್ರಕಾಶ್ ಶಿವನಗರ, ನಿತಿನ್ ಕಾಮತ್, ಸೀತಾರಾಮ್, ಪುರುಷೋತ್ತಮ್, ಶಿವಕುಮಾರ್, ಮಾಧವ, ಜನಾರ್ಧನ್, ದಿನೇಶ್, ಸೇರಿದಂತೆ ಅನೇಕ ಸ್ಥಳೀಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


