ಮಂಗಳೂರು: ಗುಜರಾತ್‌ನ ವಡೋದರದ ಪಾರುಲ್ ವಿಶ್ವವಿದ್ಯಾನಿಲಯದ ಬಿಎಸ್‌ಸಿ ಮತ್ತು ಎಂಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ತಂಡ ತಮ್ಮ ಅಧ್ಯಯನ ಪ್ರವಾಸದ ಅಂಗವಾಗಿ ದ.ಕ.ಜಿಲ್ಲಾ ರೆಡ್‌ಕ್ರಾಸ್ ಕಚೇರಿಗೆ ಸೋಮವಾರ ಭೇಟಿ ನೀಡಿ ಸಂಸ್ಥೆಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು.
ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ "ದ.ಕ. ಜಿಲ್ಲಾ ರೆಡ್‌ಕ್ರಾಸ್ ತನ್ನ ಅತ್ಯಪೂರ್ವ ಸೇವಾ ಕಾರ್ಯಗಳ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಸುಮಾರು 7 ಕೋಟಿ ರೂ.ವೆಚ್ಚದಲ್ಲಿ ಭವ್ಯ ಶತಮಾನೋತ್ಸವ ನಿರ್ಮಾಣವಾಗಿರುವದು ಹೆಮ್ಮೆಯ ಸಾಧನೆಯಾಗಿದೆ. ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗುವ ಗರ್ಭಿಣಿಯರು ಸಹಿತ ಅವಶ್ಯ ಇರುವ ರೋಗಿಗಳಿಗೆ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ಪ್ರತೀ ತಿಂಗಳು ಸುಮಾರು 500 ಯುನಿಟ್ ರಕ್ತ ಉಚಿತವಾಗಿ ಒದಗಿಸಲಾಗುತ್ತಿದೆ. ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಮೂಲಕ ಸೇವೆ ನೀಡಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯಚಟುವಟಿಕೆಗಳ ಪರಿಚಯ ನೀಡಿದರು.
ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದ ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕದ ನಿರ್ದೇಶಕ ಡಾ.ಸತೀಶ್ ರಾವ್ ಅವರು ರಕ್ತದಾನ ಶಿಬಿರದ ಬಗ್ಗೆ, ಡಾ. ಬಿ. ಸಚ್ಚಿದಾನಂದ ರೈ ಅವರು ಅಂಗಾಗ ದಾನದ ಜಾಗೃತಿ ಬಗ್ಗೆ, ಸಚೇತ ಸುವರ್ಣ ಅವರು ಪ್ರಥಮ ಚಿಕಿತ್ಸೆ ತರಬೇತಿ ಬಗ್ಗೆ ಮತ್ತು ಡಾ. ಸುಮನ.ಬಿ. ಅವರು ಮಹಿಳಾ ಆರೋಗ್ಯ ಜಾಗೃತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನಿರ್ದೇಶಕರಾದ ಗುರುದತ್ ನಾಯಕ್, ಪಿ.ಬಿ. ಹರೀಶ್ ರೈ, ಅಧ್ಯಯನ ತಂಡದ ಸಂಯೋಜಕ ಅಲೆಕ್ಸ್ ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


