ಉಡುಪಿ: ಶೀರೂರು ಮೂಲ ಮಠದಲ್ಲಿ ರಾಮನವಮಿ ಮಹೋತ್ಸವದ ಅಂಗವಾಗಿ ಧಾರ್ಮಿಕ ವೈಭವ ಮೆರೆಯಿತು. ಪರ್ಯಾಯ ಪೀಠಾಧೀಶರಾದ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಅನುಗ್ರಹದಲ್ಲಿ, ಪೇಜಾವರ ಪೀಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಠಕ್ಕೆ ಆಗಮಿಸಿ ತಮ್ಮ ಪಟ್ಟದ ದೇವರಾದ ಶ್ರೀ ರಾಮ ವಿಠ್ಠಲ ದೇವರಿಗೆ ಸಂಸ್ಥಾನ ಪೂಜೆ ಸಲ್ಲಿಸಿದರು.
ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ ಸರಳತ್ತಾಯ ದಂಪತಿಗಳು ಪರಮಪೂಜ್ಯ ಪೇಜಾವರ ಶ್ರೀಗಳನ್ನು ಯಥೋಚಿತ ಗೌರವಾದರಗಳೊಂದಿಗೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶ್ರೀ ರಾಮ ದೇವರು ಹಾಗೂ ಮುಖ್ಯಪ್ರಾಣ ದೇವರಿಗೆ ವಿಶೇಷ ಪೂಜಾ ವಿಧಿಗಳು ನೆರವೇರಿಸಲ್ಪಟ್ಟವು. ಭಕ್ತರ ಸಾನ್ನಿಧ್ಯದಲ್ಲಿ ನಡೆದ ಪೂಜಾ ಕಾರ್ಯಕ್ರಮವು ಭಕ್ತಿ ಮತ್ತು ಸಂಪ್ರದಾಯದ ಸಂಯೋಜನೆಯಾಗಿ ಗಮನ ಸೆಳೆಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

