ಪೆರಾಜೆಗುತ್ತು ಶ್ರೀ ಗುಡ್ಡೆಚಾಮುಂಡಿ ಹಾಗೂ ಪರಿವಾರ ದೈವಗಳ ಪುನರ್‌ಪ್ರತಿಷ್ಠಾ ಬ್ರಹ್ಮಕಲಶ

Upayuktha
0


ಬಂಟ್ವಾಳ: ಪೆರಾಜೆಗುತ್ತು ಶ್ರೀ ಗುಡ್ಡೆಚಾಮುಂಡಿ ಹಾಗೂ ಪರಿವಾರ ದೈವಗಳ ಭಂಡಾರ ಚಾವಡಿ ಮತ್ತು ಜುಮಾದಿ ಬಂಟ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶವು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ, ಬಿಂಬ ಶುದ್ಧಿ, ಅನುಜ್ಞಾ ಕಲಶ ಪೂಜೆ, ಪ್ರಾರ್ಥನೆ ಬಳಿಕ ಸಾನಿಧ್ಯಗಳ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ ನೆರವೇರಿತು.


ಧಾರ್ಮಿಕ ಸಭಾ ಕಾರ್ಯಕ್ರಮವು ಆನುವಂಶೀಯ ಆಡಳಿತ ಮುಕ್ತೇಸರ ಶ್ರೀಕಾಂತ ಆಳ್ವ ಪೆರಾಜೆ ಗುತ್ತು ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಮುಂಬೈಯ ಉದ್ಯಮಿ ಬಾಲಕೃಷ್ಣ ಎಂ. ರೈ ತಿಪ್ಪಕೋಡಿ, ರಾಜ್ಯ ಧಾರ್ಮಿಕ ಪರಿಷತ್ತು ಸದಸ್ಯ ಮಲ್ಲಿಕಾ ಪಕ್ಕಳ, ಉದ್ಯಮಿ ಉಮೇಶ್ ಮಹಾಬಲ ಶೆಟ್ಟಿ ಮಾಣಿ ಶುಭ ಹಾರೈಸಿ ಮಾತನಾಡಿದರು. 


ಮಾಜಿ ಸಚಿವ ಬಿ. ರಮಾನಾಥ ರೈ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಕ್ಷೇತ್ರಕ್ಕೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತ ಪಡಿಸಿದರು.


ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ ಮಾಣಿ ಸ್ವಾಗತಿಸಿದರು. ವೇದಿಕೆಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಚ್ಚಿದಾನಂದ ರೈ ಪಾಳ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕುಶಲ ಎಮ್ ಪೆರಾಜೆ, ಅಪ್ರಾಯ ಪೈ ಬುಡೋಳಿ, ಶ್ರೀಮತಿ ಪದ್ಮಾವತಿ ಜಗನ್ನಾಥ ಆಳ್ವ, ಬರೆಂಗರೆ ಜಯರಾಮ ರೈ ಪೆರಾಜೆಗುತ್ತು ಉಪಸ್ಥಿತರಿದ್ದರು.


ಪ್ರಮುಖರಾದ ಬಿ.ಟಿ. ನಾರಾಯಣ ಭಟ್, ಪ್ರಹ್ಲಾದ ಶೆಟ್ಟಿ ಜಡ್ತಿಲ, ನರೇಂದ್ರ ರೈ ನೆಲ್ತೊಟ್ಟು, ಸಚಿನ್ ರೈ ಮಾಣಿ, ಶಾಂತಪ್ಪ ಕುಲಾಲ್ ಏನಾಜೆ , ಡಾ. ಶ್ರೀನಾಥ್ ಆಳ್ವ, ಜನಾರ್ದನ ಪೆರಾಜೆ, ಸಂಜೀವ ಮಾಸ್ಟರ್, ರಾಮಣ್ಣ ಕೂಡೋಳು, ಶ್ರೀನಿವಾಸ ಪೂಜಾರಿ, ಜಯಾನಂದ ಪೆರಾಜೆ ಹಾಗೂ ಸಮಿತಿಯ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.


ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ ಸ್ವಾಗತಿಸಿದರು. ಜೀರ್ಣೋದ್ಧಾರಕ್ಕೆ ಸಹಕರಿಸಿದ ದಾನಿಗಳನ್ನು ಸನ್ಮಾನಿಸಲಾಯಿತು. ಲಕ್ಷ್ಮೀಶ ಪೆರಾಜೆ, ಸಚಿನ್ ಮಂಜೊಟ್ಟಿ ನಿರೂಪಿಸಿ, ವಿಶ್ವನಾಥ ಪೂಜಾರಿ ವಂದಿಸಿದರು. ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಮತ್ತು ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಹಾಗೂ ಸಂಜೆ ದುರ್ಗಾಪೂಜೆ ನೆರವೇರಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top