ಸಂತ ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ 'ಫಿಲೋ ಮಿಲನ' ಕಾರ್ಯಕ್ರಮ

Upayuktha
0


ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ 'ಫಿಲೋ ಮಿಲನ- 2026' ಕಾರ್ಯಕ್ರಮವು ಮಾರ್ಚ್ 14 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ರೈ ಜಿ ಮಾತನಾಡಿ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಶಿಕ್ಷಣವನ್ನು ಕೊಟ್ಟದ್ದು ಮಾತ್ರವಲ್ಲ, ನನ್ನ ಜೀವನದ ಕನಸುಗಳಿಗೆ ರೂಪ ಕೊಟ್ಟ ಸಂಸ್ಥೆಯಾಗಿದೆ. ಕಾಲೇಜು ಶಿಕ್ಷಣ ಕೇವಲ ಸರ್ಟಿಫಿಕೇಟ್ ನೀಡುವ ಸಂಸ್ಥೆಯಲ್ಲ. ವ್ಯಕ್ತಿತ್ವ ನಿರ್ಮಾಣದಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ಇಲ್ಲಿನ ಗುರುಗಳ ಸೇವಾ ಭಾವನೆ ಹಲವು ವಿದ್ಯಾರ್ಥಿಗಳಿಗೆ ದಾರಿ ತೋರಲು ದಿಕ್ಸೂಚಿಯಾಗಿದೆ ಎಂದರು.


ಕಾಲೇಜಿನ ಹಿರಿಯ ವಿದ್ಯಾರ್ಥಿ, ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಪಡೀಲ್ ನ ಪಾಲುದಾರರಾದ ಪ್ರಶಾಂತ್ ಶೆಣೈ ಮಾತನಾಡಿ, ನನ್ನ ಜೀವನದ ಪಯಣ ಫಿಲೋಮಿನ ಶಿಕ್ಷಣ ಸಂಸ್ಥೆಯೊಂದಿಗೆ ಆರಂಭವಾಯಿತು. ನನ್ನ ಕ್ರೀಡಾ ಸಾಧನೆಗೆ ಈ ಸಂಸ್ಥೆ ಬೆನ್ನೆಲುಬಾಗಿ ನಿಂತಿತ್ತು. ನನಗೆ ಕ್ರೀಡೆಯಲ್ಲಿ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸಲು ಸಾಧ್ಯವಾಯಿತು ಎಂದು ಹೇಳಿ ಸಂಸ್ಥೆಗೆ ಕೃತಜ್ಞತೆಯನ್ನು ಸಲ್ಲಿಸಿದರು.


ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್  ಮಾತನಾಡಿ, ಹಿರಿಯ ವಿದ್ಯಾರ್ಥಿಗಳ ಫಿಲೋ ಮಿಲನ ಸಂತೋಷದ ಕ್ಷಣವಾಗಿದೆ. ಸಂತ ಫಿಲೋಮಿನಾ ಕಾಲೇಜು ಒಂದು ಧ್ಯೇಯವನ್ನು ಇಟ್ಟುಕೊಂಡು ಆರಂಭವಾದ ಸಂಸ್ಥೆಯಾಗಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ತೋರಿಸಿದೆ. ಜೀವನದ ಮೌಲ್ಯಗಳನ್ನು ಕೊಟ್ಟಿದೆ ಎಂದು ಹೇಳಿದರು.


ವೇದಿಕೆಯಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಶನ್ ಲಸ್ರಾದೋ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಬೋಧಕೇತರ ವರ್ಗ ಹಾಗೂ ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಪ್ರಕಾಶ್ ಬಿ ಸ್ವಾಗತಿಸಿ, ಕಾರ್ಯದರ್ಶಿ ಭರತ್ ಕುಮಾರ್ ವಂದಿಸಿ, ಹಿರಿಯ ವಿದ್ಯಾರ್ಥಿನಿ ಶ್ರೀದೇವಿ ಕೆ ಕಾರ್ಯಕ್ರಮ ನಿರೂಪಿಸಿದರು.


ಸಭಾ ಕಾರ್ಯಕ್ರಮದ ಬಳಿಕ ಹಿರಿಯ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top