ಪ್ರಮೀಳಾ ಎಂ.ಕೆ ಸೇವಾ ಪ್ರಾಮಾಣಿಕತೆಗೆ "ಶರಣರತ್ನ" ಪ್ರಶಸ್ತಿ ಪ್ರದಾನ

Upayuktha
0


ಕಲಬುರಗಿ: ಸರಕಾರಿ ಸೇವೆಯಲ್ಲಿ ಅತ್ಯಂತ ಪ್ರಾಮಾಣಿಕತೆ ಮತ್ತು ದಕ್ಷತೆಯನ್ನು ಮೈಗೂಡಿಸಿ ಆಡಳಿತ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವುದಕ್ಕೆ ಕಲಬುರಗಿ ಮಹಾನಗರ ಪಾಲಿಕೆಯ ಆಯ್ಕೆ ಶ್ರೇಣಿಯ ಹಿರಿಯ ಕೆ.ಎ.ಎಸ್ ಅಧಿಕಾರಿ ಪ್ರಮೀಳಾ ಎಂ.ಕೆ ಅವರಿಗೆ ಶರಣಬಸವೇಶ್ವರ ಸಂಸ್ಥಾನದ ಪ್ರತಿಷ್ಠಿತ "ಶರಣರತ್ನ" ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಕಲಬುರಗಿಯ ಶ್ರೀ ಶರಣಬಸವೇಶ್ವರ ಸಂಸ್ಥಾನದ 204ನೇ ಜಾತ್ರಾ ಮಹೋತ್ಸವದ ಅಂಗವಾಗಿ ಪರಮಪೂಜ್ಯ ಶ್ರೀ ದೊಡ್ಡಪ್ಪ ಹವ್ಯಾಸಿ ಕಲಾ ಬಳಗ ಕಲಬುರಗಿ ವತಿಯಿಂದ ಮಾ. 19ರಂದು ಶ್ರೀ "ಶರಣಬಸವೇಶ್ವರ ಮಹಾತ್ಮೆ" ನಾಟಕ ಪ್ರದರ್ಶನದ ಪೂಜ್ಯ ದೊಡ್ಡಪ್ಪ ಅಪ್ಪ ವೇದಿಕೆಯಲ್ಲಿ ಶರಣ ಬಸವೇಶ್ವರ ಸಂಸ್ಥಾನದ ವತಿಯಿಂದ ಪ್ರತಿಷ್ಠಿತ  "ಶರಣ ರತ್ನ "ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಆಡಳಿತ ಕ್ಷೇತ್ರದಲ್ಲಿ ಶ್ರೀಮತಿ ಪ್ರಮೀಳಾ ಎಂ.ಕೆ ಅವರು ಜೆಸ್ಕಾಂ ಜನರಲ್ ಮ್ಯಾನೇಜರ್, ಹೆಚ್ಚುವರಿ ಪ್ರಾದೇಶಿಕ ಆಯುಕ್ತರು, ಕೆಕೆಆರ್‌ಡಿಬಿ ಉಪ ಕಾರ್ಯದರ್ಶಿ, ಜಿಮ್ಸ್ ಮುಖ್ಯ ಆಡಳಿತಾಧಿಕಾರಿ ಮುಂತಾದ ಹುದ್ದೆಗಳಲ್ಲಿ ಅತ್ಯಂತ ದಕ್ಷತೆಯಿಂದ ಮತ್ತು ಪ್ರಾಮಾಣಿಕತನದಿಂದ ಸೇವೆ ಸಲ್ಲಿಸಿದ ವಿಶಿಷ್ಟ ಸೇವಾ ಸಾಧಕರು ಎಂದು ಗುರುತಿಸಿಕೊಂಡಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಎರಡು ಚಿನ್ನದ ಪದಕಗಳೊಂದಿಗೆ ಪ್ರಥಮ ರ್‍ಯಾಂಕ್ ಪಡೆದ ಅವರು ಪ್ರತಿಭಾವಂತ ಆಡಳಿತಾಧಿಕಾರಿಯಾಗಿ ಗುರುತಿಸಿಕೊಂಡವರು. ಹತ್ತು ವರ್ಷಗಳಷ್ಟು ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾನಗರ ಪಾಲಿಕೆ ವಲಯ ಆಯುಕ್ತರು, ದತ್ತಿ ಇಲಾಖೆ ಸಹಾಯಕ ಆಯುಕ್ತರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ದ.ಕ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ವಿಶೇಷ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿ ಜನಾನುರಾಗಿದ್ದಾರೆ. ಇವರಿಗೆ ಶರಣಬಸವೇಶ್ವರ ಸಂಸ್ಥಾನ ಮಠದ ಕಾರ್ಯದರ್ಶಿ  ಬಸವರಾಜ್ ದೇಶಮುಖ್ ಮೈಸೂರು ಪೇಟ, ಶಾಲು, ಹಾರ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು ಎಂದು ಹವ್ಯಾಸಿ ಕಲಾ ಬಳಗದ ಅಧ್ಯಕ್ಷ ರಮೇಶ್ ಬಂಧು ತಿಳಿಸಿದ್ದಾರೆ.


ಸರಕಾರಿ ಸೇವೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತನದಿಂದ ಜನಪರ ಸೇವೆ ಸಲ್ಲಿಸುತ್ತಿರುವ ಪ್ರಮೀಳಾ ಎಂ.ಕೆ ಅವರಿಂದ ಈ ಭಾಗಕ್ಕೆ ಇನ್ನಷ್ಟು ಉತ್ತಮ ಸೇವೆ ಮತ್ತು ಕೊಡುಗೆ ಸಲ್ಲಲಿ ಎಂದು ಬಸವರಾಜ್ ದೇಶಮುಖ್ ಸನ್ಮಾನಿಸಿದ ನಂತರ ಶುಭ ಹಾರೈಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top