ಕಾಸರಗೋಡು: ಮಲಯಾಳ ಭಾಷಾ ಮಸೂದೆ ಕನ್ನಡಿಗರ ಭವಿಷ್ಯಕ್ಕೆ ಗಂಭೀರ ಪರಿಣಾಮಗಳನ್ನು ಉಂಟುಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಅದರ ವಿರುದ್ಧವಾಗಿ ಪ್ರತಿಭಟನಾ ಸಭೆಯನ್ನು ಮಾರ್ಚ್ 28, 2026ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.
ನುಳ್ಳಿಪ್ಪಾಡಿಯ ಕನ್ನಡ ಭವನ ಸಂಕೀರ್ಣದಲ್ಲಿರುವ “ಕನ್ನಡದ ಶಕ್ತಿ ಬೇವಿಂಜೆ ಶ್ರೀಧರ ಕಕ್ಕಿಲ್ಲಾಯ – ಸರೋಜಾದೇವಿ ಉಚಿತ ಸಾರ್ವಜನಿಕ ವಾಚನಾಲಯ”ದಲ್ಲಿ ನಡೆಯಲಿರುವ ಈ ಸಭೆಯನ್ನು ಕನ್ನಡ ಭವನದ ನೇತೃತ್ವದಲ್ಲಿ, ವಿವಿಧ ಕನ್ನಡ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ.
ಪ್ರತಿಭಟನಾ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ. ಮಸೂದೆ ಕನ್ನಡಿಗರ ಹಕ್ಕುಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಈ ವಿಚಾರದಲ್ಲಿ ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪ್ರಕಟಣೆಯಲ್ಲಿ ತಿಳಿಸಿದ್ದು, ಸಭೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

