ಪುತ್ತೂರು: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದ ಶ್ರೀಮದ್ ರಂಭಾಪುರಿ ಕಲಾ ಹಾಗೂ ವಾಣಿಜ್ಯ ಕಾಲೇಜು ಇಲ್ಲಿ 'ಭಾರತದ ಸಂವಿಧಾನ, ಸಾಮಾಜಿಕ ನ್ಯಾಯ, ಮತ್ತು ಸುಸ್ಥಿರ ಅಭಿವೃದ್ಧಿ: ಬಹುಶಿಸ್ತೀಯ ದೃಷ್ಟಿಕೋನ' ವಿಷಯದಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧವನ್ನು ಮಂಡಿಸಿದರು.
ಈ ವಿಚಾರ ಸಂಕಿರಣದಲ್ಲಿ ಸಮಾಜಶಾಸ್ತ್ರ ವಿಭಾಗದ 31 ವಿದ್ಯಾರ್ಥಿಗಳು, 3 ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು, ಐಚ್ಛಿಕ ಇಂಗ್ಲೀಷ್ ಹಾಗೂ ಐಚ್ಛಿಕ ಕನ್ನಡ ವಿಭಾಗಗಳಿಂದ ನಾಲ್ಕು ವಿದ್ಯಾರ್ಥಿಗಳು ಹೀಗೆ ಒಟ್ಟು 38 ವಿದ್ಯಾರ್ಥಿಗಳು ವಿಚಾರ ಸಂಕಿರಣದ ವಿಷಯಗಳಿಗೆ ಸಂಬಂಧಿತ ಹಲವು ವಿಷಯಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು.
ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾ ಎಸ್ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧಗಳನ್ನು ಸಿದ್ಧಪಡಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


