ಮಂಗಳೂರು: ಎಸ್.ಸಿ.ಎಸ್ ಕಾಲೇಜ್ ಮತ್ತು ಇನ್ಸಿಟ್ಯೂಟ್ ಆಫ್ ನಸಿರ್ಂಗ್ ಸೈನ್ಸಸ್‌ನ ಪದವಿ ಮತ್ತು ಡಿಪ್ಲೊಮಾ ಪ್ರದಾನ ಸಮಾರಂಭವು ಮಂಗಳವಾರ ಮಾರ್ಚ್ 24, 2026 ರಂದು ಮಂಗಳೂರಿನ ಬೆಂದೂರಿನಲ್ಲಿರುವ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಹಾಲ್‌ನಲ್ಲಿ ನಡೆಯಿತು.
ಕಾರ್ಯಕ್ರಮವು ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಯಿತು, ನಂತರ ಗಣ್ಯರು ವೇದಿಕೆಯಲ್ಲಿ ದೀಪ ಬೆಳಗಿಸಿದರು. ಸಮಾರಂಭದ ಮುಖ್ಯ ಅತಿಥಿ ಡಾ| ಲೀನಾ ಕೆ ಸಿ, ಪ್ರಾಂಶುಪಾಲರು ಮತ್ತು ನರ್ಸಿಂಗ್ ವಿಭಾಗದ ಮುಖ್ಯಸ್ಥೆ, ಯೆನಪೋಯ ನರ್ಸಿಂಗ್ ಕಾಲೇಜ್, ಪದವೀಧರರನ್ನು ಪ್ರೀತಿ, ಸಹಾನುಭೂತಿ ಮತ್ತು ಸಮರ್ಪಣೆಯೊಂದಿಗೆ ಶುಕ್ರೂಷೆ ಆರೈಕೆಯನ್ನು ನೀಡುವಂತೆ ಮತ್ತು ಶುಕ್ರೂಷೆ ಆರೈಕೆಯಲ್ಲಿ ನೈತಿಕ ಮೌಲ್ಯಗಳನ್ನು ಒತ್ತಿ ಹೇಳಿದರು.
ಕರ್ನಾಟಕ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಡಾ. ಅಭಿನಯ್ ಸೊರಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಶ್ವಿನಿ ಯು. ಸಹ ಪ್ರಾಧ್ಯಾಪಕಿಯವರು ಸ್ವಾಗತಿಸಿದರು. ಅನಿಲ್ ಕುಮಾರ್ ಸಿ.ಎಂ., ಉಪ ಪ್ರಾಂಶುಪಾಲರು ಬಿ.ಎಸ್ಸಿ. ಮತ್ತು ಎಂ.ಎಸ್ಸಿ. ಪದವೀಧರರು ಮತ್ತು ಡೆನ್ಸಿಲ್ ಡಿಸೋಜ, ಡಿಪ್ಲೊಮಾ ಪಡೆದವರ ಪಟ್ಟಿಯನ್ನು ಓದಿದರು. ಪ್ರಾಂಶುಪಾಲರಾದ ಪ್ರೊ. ಲೋಲಿತಾ ಎಸ್.ಎಂ. ಡಿಸೋಜಾ ಅವರು ಪದವೀಧರರಿಗೆ ಪ್ರಮಾಣ ವಚನ ಬೋಧಿಸಿ ಕಾಲೇಜಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಕರ್ನಾಟಕ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಡಾ. ಅಮರನಾಥ್ ಸೊರಕೆ, ಎಸ್‌ಸಿಎಸ್ ಸಮೂಹ ಸಂಸ್ಥೆಗಳ ಆಡಳಿತ ಅಧಿಕಾರಿ ಯು.ಕೆ. ಖಾಲಿದ್, ಎಸ್‌ಸಿಎಸ್ ಸಮೂಹ ಸಂಸ್ಥೆಗಳ ಸಹಾಯಕ ಆಡಳಿತ ಅಧಿಕಾರಿ ಸಾಗರ್ ಕೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಡೆಲಿಶ ಕ್ಯಾರೋಲ್ ಅವರು ನಿರ್ವಹಿಸಿದರು. ಪ್ರಮೀಳ ಹೆಚ್.ವಿ ಸಹ ಪ್ರಾಧ್ಯಾಪಕಿ ಅವರು ವಂದನಾರ್ಪಣೆ ಮಾಡಿದರು. ಬಳಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


