ಇಂದು ಎಸ್‌ಡಿಎಂ ಕಾನೂನು ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಪದಗ್ರಹಣ

Upayuktha
0


ಮಂಗಳೂರು: ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ರಾಘವೇಂದ್ರ ರಾವ್ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮಾ.14ರಂದು ಬೆಳಗ್ಗೆ 9ಕ್ಕೆ  ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ತಾರಾನಾಥ ಅಧ್ಯಕ್ಷತೆ ವಹಿಸಲಿದ್ದಾರೆ.


ಹೈಕೋರ್ಟ್ ವಕೀಲ ಪಿ.ಪಿ.ಹೆಗ್ಡೆ ವಿದ್ಯಾರ್ಥಿ ವೇತನ ವಿತರಿಸಲಿದ್ದಾರೆ. ಸುಪ್ರೀಂ ಕೋರ್ಟ್ ವಕೀಲ ರೋಹಿತ್ ರಾವ್ ಪೂರ್ವ ವಿದ್ಯಾರ್ಥಿ ಸಂಘದ ಲಾಂಛನ ಅನಾವರಣಗೊಳಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್, ಎಂಎಲ್‌ಸಿ ಐವನ್ ಡಿಸೋಜಾ, ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್. ವಿ., ಪೂರ್ವ ವಿದ್ಯಾರ್ಥಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಡಾ. ದೇವರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top