ಹುನಗುಂದ: ತಾಲೂಕಿನ ತಿಮ್ಮಾಪುರ ಗ್ರಾಮದ ರೆಡ್ಡಿ ಸಮಾಜದ ಹಿರಿಯ ಜೀವಿ ಸಂಗನಗೌಡ ಶಿವನಗೌಡ ರಂಗನಗೌಡ ಇವರು ಇಂದು (ಮಾ.05) ಮುಂಜಾನೆ 5.30 ಗಂಟೆಗೆ ಬಾಗಲಕೋಟೆಯಲ್ಲಿ ನಿಧನರಾದರು.
ಮೃತರು ಗ್ರಾಮದ ದಳಪತಿಗಳಾಗಿ ಸೇವೆ ಸಲ್ಲಿಸಿದ್ದಲ್ಲದೆ ಮತ್ತು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮರಣದ ಕಾಲಕ್ಕೆ ಅವರಿಗೆ 74 ವರ್ಷ ವಯಸ್ಸಾಗಿತ್ತು.
ವೃತರು ರಂಗ ಕಲಾವಿದರಾಗಿ ಹಾಗೂ ಹುಟ್ಟು ಹೋರಾಟಗಾರರಾದ ಸಂಗನಗೌಡರು ಅನ್ಯಾಯದ ವಿರುದ್ಧ ನಿರಂತರ ಹೋರಾಟ ಮಾಡಿದ್ದಾರೆ.
ಮೃತರು ಪತ್ನಿ ಮಂಗಲಾ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಗಂಡು ಮಕ್ಕಳಾದ, ಹಿರಿಯ ಪುತ್ರ ಶಿವನಗೌಡ ಬಾಗಲಕೋಟೆಯ ಬಾಪೂಜಿ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಲಿಮಿಟೆಡ್‌ನ ನಿರ್ದೇಶಕರಾಗಿದ್ದಾರೆ ಕಿರಿಯ ಪುತ್ರ ಗೌರಿಶಂಕರ ಅಮೆರಿಕದಲ್ಲಿ ಇಂಜಿನಿಯರ್ ಆಗಿದ್ದಾರೆ.
ಹಿರಿಯ ಮಗಳು ಬನು ಗೃಹಿಣಿಯಾಗಿದ್ದಾರೆ. ಕಿರಿಯ ಮಗಳು ಶೈಲಾ ಪ್ರೌಢಶಾಲಾ ಶಿಕ್ಷಕಿಯಾಗಿದ್ದಾರೆ, ಮಾಜಿ ಸಚಿವ ಎಸ್ ಆರ್ ಪಾಟೀಲ್ ಮೃತರ ಅಳಿಯಂದಿರು. ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಸೋಗ್ರಾಮವಾದ ತಿಮ್ಮಾಪುರ ಗ್ರಾಮದಲ್ಲಿ 4:30 ಗಂಟೆಗೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗ್ರಾಮ ಪಂಚಾಯತಿ ಸದಸ್ಯರು ಸಂತಾಪ ಸೂಚಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


