ಸ್ಕೌಟ್ಸ್-ಗೈಡ್ಸ್ ದಳ ಉದ್ಘಾಟನೆ: ಮಕ್ಕಳ ಮೌಲ್ಯಾಭಿವೃದ್ಧಿಗೆ ಒತ್ತು

Upayuktha
0


ಆಲೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಆಲೂರು ವತಿಯಿಂದ ವೈ.ಎನ್.ಪುರ ಮಗ್ಗೆಯ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಳ ಉದ್ಘಾಟನಾ ಸಮಾರಂಭ ನಡೆಯಿತು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಕಾರ್ಯದರ್ಶಿ ರಂಗೇಗೌಡ, ಸ್ಕೌಟ್ಸ್-ಗೈಡ್ಸ್ ಚಳವಳಿ ಮಕ್ಕಳಲ್ಲಿ ಶಿಸ್ತು, ಸಮಯಪಾಲನೆ, ಸಂಯಮ ಹಾಗೂ ಸೇವಾ ಮನೋಭಾವನೆ ಬೆಳೆಸಿ ಉತ್ತಮ ನಾಗರೀಕರನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಹೇಳಿದರು. ಪಠ್ಯಪುಸ್ತಕಗಳಿಗಿಂತ ಹೊರತಾಗಿ ಜೀವನ ಮೌಲ್ಯಗಳನ್ನು ಈ ಚಳವಳಿ ಪರಿಣಾಮಕಾರಿಯಾಗಿ ಬೋಧಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.


ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ, “ಸ್ಕೌಟಿಂಗ್ ಈಸ್ ಔಟಿಂಗ್” ತತ್ವದಂತೆ ಮಕ್ಕಳಿಗೆ ಹೊರಜಗತ್ತಿನ ಪರಿಚಯ ನೀಡಿ ಸಾಮಾಜಿಕ ಜ್ಞಾನವನ್ನು ವೃದ್ಧಿಸುತ್ತದೆ. ಹಿರಿಯರು, ವೃದ್ಧರು ಹಾಗೂ ದುರ್ಬಲರಿಗೆ ಸಹಾಯ ಮಾಡುವ ಗುಣಗಳನ್ನು ಬೆಳೆಸುವುದು ಈ ಚಳವಳಿಯ ಉದ್ದೇಶ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಖಜಾಂಚಿ ಆರ್.ಎಸ್. ರಮೇಶ್, ರಾಜ್ಯ ಸಂಘಟನಾ ಆಯುಕ್ತೆ ಎಚ್.ಎಂ. ಪ್ರಿಯಾಂಕ, ತಾಲ್ಲೂಕು ಕಾರ್ಯದರ್ಶಿ ಕೊಟ್ರೇಶ್ ಎಸ್. ಉಪ್ಪಾರ್, ಮುಖ್ಯಶಿಕ್ಷಕಿ ಸಂಧ್ಯಾ ಜಯರಾಮ್, ಸ್ಕೌಟ್ ಮಾಸ್ಟರ್ ಶಿವಶಂಕರ್, ಶಿಕ್ಷಕ ಮೋಹನ್, ಪುಟ್ಟರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top