ಮಹಾಂತಮ್ಮ ಬಂಡೆಪ್ಪನವರ ಬಾಗಲಕೋಟ ವಿಶ್ವವಿದ್ಯಾಲಯ ಖೋ ಖೋ ತಂಡಕ್ಕೆ ಆಯ್ಕೆ

Upayuktha
0




ಹುನಗುಂದ: ಪಟ್ಟಣದ ವ್ಹಿ.ಎಮ್.ಎಸ್.ಕೆ.ಆರ್. ವಸ್ತ್ರದ ಕಲಾ, ವಿಜ್ಞಾನ ಹಾಗೂ ವ್ಹಿ.ಎಸ್. ಬೆಳ್ಳಿಹಾಳ ವಾಣಿಜ್ಯ ಪದವಿ ಮಹಾವಿದ್ಯಾಲಯದ ಬಿ.ಎ. ಪ್ರಥಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಕು. ಮಹಾಂತಮ್ಮ ಬಸಪ್ಪ ಬಂಡೆಪ್ಪನವರ ಬಾಗಲಕೋಟ ವಿಶ್ವವಿದ್ಯಾಲಯ ಖೋ-ಖೋ ತಂಡಕ್ಕೆ ಆಯ್ಕೆಯಾಗಿದ್ದಾಳೆ ಎಂದು ಕ್ರೀಡಾ ನಿರ್ದೇಶಕರಾದ ಲೆಫ್ಟಿನೆಂಟ್ ಎಸ್.ಬಿ. ಚಳಗೇರಿ ತಿಳಿಸಿದ್ದಾರೆ.


ಇತ್ತೀಚೆಗೆ ಬಾಗಲಕೋಟೆ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಜರುಗಿದ ಖೋ ಖೋ ತಂಡ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದು. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಜರುಗುವ ದಕ್ಷಿಣ ಭಾರತದ ಅಂತರ್ ವಿಶ್ವವಿದ್ಯಾಲಯದ ಖೋ-ಖೋ ಪಂದ್ಯಾವಳಿಯಲ್ಲಿ ಬಾಗಲಕೋಟ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ, 


ಬಾಗಲಕೋಟ ವಿಶ್ವವಿದ್ಯಾಲಯ ತಂಡಕ್ಕೆ ಆಯ್ಕೆಯಾದ ಕ್ರೀಡಾಪಟುವಿಗೆ ಸಂಘದ ಕಾರ್ಯಾಧ್ಯಕ್ಷ ಡಾ. ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ, ಆಡಳಿತ ಮಂಡಳಿಯ ನಿರ್ದೇಶಕರು, ಸರ್ವ ಸದಸ್ಯರು ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್.ಆರ್. ಗೋಲಗೊಂಡ, ಐ.ಕ್ಯೂ.ಎ.ಸಿ ಸಂಯೋಜಕ ಡಾ.ಎಲ್.ಎನ್.ಕುಲಕರ್ಣಿ, ಒಕ್ಕೂಟದ ಕಾರ್ಯಾಧ್ಯಕ್ಷ ಡಾ. ಭೀಮಾಶಂಕರ ಹಲಸಂಗಿ ಮಹಾವಿದ್ಯಾಲಯದ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top