ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಕೇಂದ್ರ ಬಜೆಟ್ ವಿಶ್ಲೇಷಣಾ ವಿಚಾರ ಸಂಕಿರಣ

Upayuktha
0


ಉಡುಪಿ: ಎಂ.ಜಿ.ಎಂ ಸಂಧ್ಯಾ ಕಾಲೇಜು, ಉಡುಪಿ ಮತ್ತು ಐಸಿಎಐ ಉಡುಪಿ ಶಾಖೆ (SIRC) ಅವರ ಸಂಯುಕ್ತ ಆಶ್ರಯದಲ್ಲಿ “ಕೇಂದ್ರ ಬಜೆಟ್ ವಿಶ್ಲೇಷಣೆ” ಕುರಿತು ವಿದ್ಯಾರ್ಥಿ ವಿಚಾರ ಸಂಕಿರಣ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ CA ವೆಂಕಟರಮಣ ಕಾಮತ್ ಅವರು ಭಾಗವಹಿಸಿ ಕೇಂದ್ರ ಬಜೆಟ್‌ನ ಪ್ರಮುಖ ಅಂಶಗಳು, ಆರ್ಥಿಕ ಪರಿಣಾಮಗಳು ಹಾಗೂ ವಿದ್ಯಾರ್ಥಿಗಳಿಗೆ ಅದರ ಮಹತ್ವದ ಕುರಿತು ಸಮಗ್ರವಾಗಿ ವಿವರಿಸಿದರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ಎಸ್ ನಾಯಕ್ ಅವರು ಮಾತನಾಡಿ, ಇಂತಹ ವಿಚಾರ ಸಂಕಿರಣಗಳು ವಿದ್ಯಾರ್ಥಿಗಳಲ್ಲಿ ಆರ್ಥಿಕ ಜ್ಞಾನವನ್ನು ವಿಸ್ತರಿಸಲು ಸಹಕಾರಿ ಎಂದು ಅಭಿಪ್ರಾಯಪಟ್ಟರು.


ಬಿ.ಕಾಂ ಮತ್ತು ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ ಶೆಟ್ಟಿ ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ICAI ಉಡುಪಿ ಶಾಖೆಯ SICASA ಅಧ್ಯಕ್ಷರಾದ CA ಮಾಧುರಿ ಪ್ರಭು ಅವರು ಅತಿಥಿಗಳನ್ನು ಸ್ವಾಗತಿಸಿದರು. SICASA ಕಾರ್ಯದರ್ಶಿಯಾದ ಚಂದ್ರ ಎಸ್. ನಿರೂಪಿಸಿದರು. SICASA ಖಜಾಂಚಿ ಅಶ್ವಥ್ ಶೆಟ್ಟಿ ಅತಿಥಿ ಪರಿಚಯ ನೀಡಿದರು. ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕರಾದ ಕು. ಕಾವ್ಯಶ್ರೀ ಅವರು ಧನ್ಯವಾದಗೈದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top