ಸಾಲದ ಹೊರೆ ಹೆಚ್ಚಿಸಿದ ಬಜೆಟ್; ಘೋಷಣೆಗಳಿಗೆ ಮಾತ್ರ ಸೀಮಿತ: ನಳಿನ್ ಕುಮಾರ್ ಕಟೀಲ್

Upayuktha
0



ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ ಕೇವಲ ಘೋಷಣೆಗಳಿಗೆ ಮಾತ್ರ ಸೀಮಿತವಾಗಿದ್ದು, ಸಾಲದ ಹೊರೆಯನ್ನು ಹೆಚ್ಚಿಸುವ ಬಜೆಟ್ ಆಗಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.


ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಜೆಟ್ ಗಾತ್ರ ಹೆಚ್ಚಾದರೂ ಅದರ ಜೊತೆಗೆ ರಾಜ್ಯದ ಸಾಲದ ಹೊರೆ ಕೂಡ ಇಮ್ಮಡಿಯಾಗಿದೆ ಎಂದು ಹೇಳಿದರು. ಅಬಕಾರಿ ಇಲಾಖೆಯ ಮೂಲಕ ಸರ್ಕಾರ ಹೆಚ್ಚಿನ ರಾಜಸ್ವ ನಿರೀಕ್ಷಿಸಿರುವುದು ರಾಜ್ಯದ ಜನತೆಗೆ ದೌರ್ಭಾಗ್ಯಕರ ಎಂದು ಅವರು ಅಭಿಪ್ರಾಯಪಟ್ಟರು.


ಸಾಲದಲ್ಲಿ ಮುಳುಗಿರುವ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳ ಪೈಕಿ ಶೇಕಡಾ 25ರಷ್ಟನ್ನು ಕೂಡ ಕಾರ್ಯಗತಗೊಳಿಸುವುದು ಸಾಧ್ಯವಾಗುವುದಿಲ್ಲ ಎಂದು ಕಟೀಲ್ ಹೇಳಿದ್ದಾರೆ.


ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಓಲೈಕೆ ಮಾಡಿರುವುದೇ ದೊಡ್ಡ ಸಾಧನೆಯಾಗಿ ಕಾಣಿಸುತ್ತಿದ್ದು, ಕರಾವಳಿ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಪುತ್ತೂರು ಮೆಡಿಕಲ್ ಕಾಲೇಜಿಗೆ ಯಾವುದೇ ಅನುದಾನ ಘೋಷಿಸದಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ನಿರಾಶೆ ತಂದಿದೆ ಎಂದು ಹೇಳಿದರು.


ದಕ್ಷಿಣ ಕನ್ನಡ ಜಿಲ್ಲೆಯ ಪಾಲಿಗೆ ಈ ಬಜೆಟ್ ನಿರಾಶಾದಾಯಕವಾಗಿದೆ ಎಂದು ಅವರು ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top